Wednesday, November 30, 2022

ನಾಳೆ ಅದ್ದೂರಿ ಜಂಬೂಸವಾರಿ: ರಾಜ್ಯಪಾಲರ ಗೈರು

Follow Us

newsics.com

ಮೈಸೂರು: ಕೊರೋನಾ‌ ಹಿನ್ನೆಲೆಯಲ್ಲಿ ಕಳೆದೆರಡು ವರ್ಷಗಳಿಂದ ಕಳೆಗುಂದಿದ್ದ ದಸರಾ ಜಂಬೂಸವಾರಿ ಈ ಬಾರಿ ಅದ್ದೂರಿಯಾಗಿ ನಡೆಯಲಿದೆ.

ಜಂಬೂಸವಾರಿಯ ಮುನ್ನಾ ದಿನವಾದ ಮಂಗಳವಾರ ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ ಕಳೆಗಟ್ಟಿತ್ತು. ಜಂಬೂಸವಾರಿ ಹಿನ್ನೆಲೆಯಲ್ಲಿ ಮೈಸೂರಿನಾದ್ಯಂತ ಭಾರೀ ಬಂದೋಬಸ್ತ್ ಮಾಡಲಾಗಿದೆ. ಅರಮನೆ ಆವರ ಸೇರಿದಂತೆ ಎಲ್ಲೆಡೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಕಳೆದೆರಡು ವರ್ಷ ಸಿಂಪಲ್ಲಾಗಿ ನಡೆದಿದ್ದ ದಸರಾ ಈ ಬಾರಿ ವೈಭವೋಪೇತವಾಗಿ ನಡೆಯಲಿದೆ. ಜಂಬೂಸವಾರಿಗೆ ಕೊನೆ ಕ್ಷಣದ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ.

ಕೋವಿಡ್ ಸೋಂಕಿಗೊಳಗಾಗಿರುವ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ದಸರಾ ಕಾರ್ಯಕ್ರಮಗಳಲ್ಲಿ‌ ಪಾಲ್ಗೊಳ್ಳುತ್ತಿಲ್ಲ ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಮೈಸೂರಿನಲ್ಲಿ ಮಂಗಳವಾರ ಹೇಳಿದ್ದಾರೆ.

ಜಂಬೂಸವಾರಿ ಸಾಗುವ ರಸ್ತೆಯ ಇಕ್ಕೆಲಗಳಲ್ಲಿ ಸಾರ್ವಜನಿಕರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಆನೆಗಳಿಗೆ ಒಂದು ತಿಂಗಳಿಂದ ತರಬೇತಿ ನೀಡಲಾಗಿದೆ. ಅ.5ರ ಸಂಜೆ ಜಂಬೂಸವಾರಿ ಸಾಗಲಿದೆ, ಇದರ ಜತೆಗೆ 40 ಸ್ತಬ್ಧಚಿತ್ರಗಳು, ಕಲಾತಂಡಗಳು ಮೆರವಣಿಗೆಯಲ್ಲಿ ಸಾಗಲಿವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಹೇಳಿದರು.

ಬಂದೋಬಸ್ತ್‌ಗೆ ನಾಲ್ಕು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ರೀತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯಪಾಲರು, ಮುಖ್ಯಮಂತ್ರಿ, ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ಸೇರಿದಂತೆ ಗಣ್ಯಾತಿಗಣ್ಯರು ಆಗಮಿಸಲಿದ್ದಾರೆ ಎಂದು ಹೇಳಿದರು. ಜಂಬೂಸವಾರಿಗೆ 15-20 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ಹೇಳಿದರು.

ಬುಧವಾರ ಬೆಳಗ್ಗೆಯೇ ಅರಮನೆಯಲ್ಲಿರೋ ಆಯುಧಗಳನ್ನ ಕೋಡಿ ಸೋಮೇಶ್ವರ ದೇಗುಲಕ್ಕೆ ರವಾನಿಸಿ ಪೂಜೆ ಸಲ್ಲಿಸಲಾಗುತ್ತದೆ. ಬಳಿಕ ಯದುವೀರ ಕೃಷದತ್ತ ಚಾಮರಾಜ ಒಡೆಯರ್‌ ಕೂಡ ಪೂಜೆ ಸಲ್ಲಿಸಲಿದ್ದಾರೆ. ಪ್ರತೀ ವರ್ಷದಂತೆ ಈ ವರ್ಷವೂ ಕೂಡ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯಲಿದೆ.

ವಿಶ್ವವಿಖ್ಯಾತ ದಸರಾದಲ್ಲಿ ಈ ಬಾರಿ ವಜ್ರಮುಷ್ಠಿ ಕಾಳಗಕ್ಕೆ ಅನುಮತಿ ಸಿಕ್ಕಿದೆ. ಕಳೆದ ಎರಡು ವರ್ಷಗಳಿಂದ ನಿಂತಿದ್ದ ಜಟ್ಟಿ ಕಾಳಗಕ್ಕೆ ಉಸ್ತಾದ್ ಮಂಜು ಜೆಟ್ಟಿ ಸಮ್ಮುಖದಲ್ಲಿ ಜೊತೆ ಕಟ್ಟುವಿಕೆ ಕಾರ್ಯ ನಡೆದಿದೆ. ಈ ಬಾರಿ ಮೈಸೂರು, ಬೆಂಗಳೂರು, ಚಾಮರಾಜನಗರ, ಚನ್ನಪಟ್ಟಣದಿಂದ ತಲಾ ಒಬ್ಬರು ಜೆಟ್ಟಿಗಳು ಭಾಗಿಯಾಗಲಿದ್ದಾರೆ.

ಸತ್ಯನಾರಾಯಣ ಪೂಜೆ ಮಾಡಿದ್ರೂ ಸಿಗಲಿಲ್ಲ ಹೆಣ್ಣು: ಅರ್ಚಕನ ಕಿವಿ ಕಚ್ಚಿದ ಅಪ್ಪ, ಮಗ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!