Friday, May 20, 2022

ಮೈಸೂರು ಜಂಬೂಸವಾರಿ; 2 ಸಾವಿರ ಮಂದಿಗೆ ಅವಕಾಶ ಸಾಧ್ಯತೆ

Follow Us

newsics.com
ಮೈಸೂರು: ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿಯ ಮೈಸೂರು ದಸರಾ ತೀರಾ ಸರಳವಾಗಿ ನಡೆಯಲಿದೆ.
ಚಾಮುಂಡಿ ಬೆಟ್ಟದಲ್ಲಿ ನಡೆಯುವ ಉದ್ಘಾಟನೆ ಕಾರ್ಯಕ್ರಮಕ್ಕೆ 250 ಮಂದಿ, ಅರಮನೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 1 ಸಾವಿರ ಜನರಿಗೆ ಮಾತ್ರ ಅವಕಾಶ ನೀಡಲಾಗುವುದು.
ಅರಮನೆ ಆವರಣದಲ್ಲೇ ನಡೆಯುವ ಜಂಬೂಸವಾರಿಗೆ 2 ಸಾವಿರ ಜನರಿಗೆ ಮಾತ್ರ ಅವಕಾಶ ನೀಡಲು ಚಿಂತನೆ ನಡೆಸಿದ್ದೇವೆ ಎಂದು ಮೈಸೂರು ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್ ತಿಳಿಸಿದ್ದಾರೆ.
ಈಗಾಗಲೇ ಮೈಸೂರಿನಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಿದ್ದು, ದಸರಾ ವೇಳೆ ಹೆಚ್ಚು ಜನ ಸೇರುವುದರಿಂದ ಕೊರೋನಾ ಹರಡುವಿಕೆ ಇನ್ನಷ್ಟು ಹೆಚ್ಚುವ ಆತಂಕವಿರುವುದರಿಂದ ಕಡಿಮೆ ಜನರಿಗೆ ಮಾತ್ರ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ ಎಂದರು.
ಈ ನಿಟ್ಟಿನಲ್ಲಿ ಈಗಾಗಲೇ ಕೇಂದ್ರ ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಲಾಗಿದ್ದು, ಅವರ ಅನುಮತಿ, ಮಾರ್ಗಸೂಚಿ ಆಧರಿಸಿ ದಸರಾ ನಡೆಯಲಿದೆ ಎಂದು ಸಚಿವ ಸೋಮಶೇಖರ್ ಹೇಳಿದರು.

ಮತ್ತಷ್ಟು ಸುದ್ದಿಗಳು

Latest News

ಮತ್ತೆ ಚಿನ್ನ, ಬೆಳ್ಳಿ ದುಬಾರಿ

newsics.com ಬೆಂಗಳೂರು: ಶುಕ್ರವಾರ (ಮೇ 20) ಚಿನ್ನ, ಬೆಳ್ಳಿ ಮತ್ತೆ ದುಬಾರಿಯಾಗಿದೆ. 10 ಗ್ರಾಂ ಚಿನ್ನಕ್ಕೆ 640 ರೂ. ಹೆಚ್ಚಳವಾಗಿದೆ. ಬೆಳ್ಳಿ 1 ಕೆಜಿಗೆ ಬರೋಬ್ಬರಿ 900...

ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಸಾಧ್ಯತೆ

newsics.com ಬೆಂಗಳೂರು: ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ‌ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ನಾಗೇಶ್, ದ್ವಿತೀಯ ಪಿಯು...

ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡದಲ್ಲಿ ಮಾತನಾಡಿದ ಸಂಸದ ಚಂದ್ರ ಆರ್ಯ

newsics.com ಕೆನಡಾ: ಕೆನಡಾ ಪಾರ್ಲಿಮೆಂಟ್ ನಲ್ಲಿ ಸಂಸದ ಚಂದ್ರ ಆರ್ಯ ಕನ್ನಡದಲ್ಲಿ ಮಾತನಾಡಿದ್ದು, ಇದೇ ಮೊದಲ ಬಾರಿಗೆ ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡದ ಕಹಳೆ ಮೊಳಗಿದೆ. ನಾನು ನನ್ನ ಮಾತೃ ಭಾಷೆಯಾದ ಕನ್ನಡದಲ್ಲಿ ಮಾತನಾಡುತ್ತೇನೆ ಎಂದ...
- Advertisement -
error: Content is protected !!