Monday, November 29, 2021

ಮೈಸೂರಿನ ಮೊದಲ ಕೊರೋನಾ ಸೋಂಕಿತ ಡಿಸ್ಚಾರ್ಜ್

Follow Us

ಮೈಸೂರು: ಜಿಲ್ಲೆಯಲ್ಲಿ ತೀವ್ರ ತಲ್ಲಣ ಸೃಷ್ಟಿಸಿರುವ ಕೊರೋನಾ ಸೋಂಕಿತ ಮೊದಲ ವ್ಯಕ್ತಿ ಸಂಪೂರ್ಣ ಗುಣಮುಖರಾಗಿದ್ದು, ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ದುಬೈನಿಂದ ಆಗಮಿಸಿದ್ದ ಮೈಸೂರಿನ ಮೊದಲ ಸೋಂಕಿತ 35 ವರ್ಷದ ವ್ಯಕ್ತಿ ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮೈಸೂರಿನ ಕೊವಿಡ್-19 ಆಸ್ಪತ್ರೆಯಲ್ಲಿ ಈ ವ್ಯಕ್ತಿ ಕಳೆದ 18 ದಿನಗಳ ಕಾಲ ಚಿಕಿತ್ಸೆ ಪಡೆದುಕೊಂಡಿದ್ದರು. ಎರಡನೇ ಬಾರಿಯ ಸ್ಯಾಂಪಲ್ ಟೆಸ್ಟ್‌ನಲ್ಲಿ ನೆಗೆಟಿವ್ ವರದಿ ಬಂದಿದೆ. ಕೊರೋನಾ ಗುಣಲಕ್ಷಣಗಳಿಂದಲೂ ಮುಕ್ತನಾದ ಈ ವ್ಯಕ್ತಿಯನ್ನು ಆಸ್ಪತ್ರೆಯಿಂದ ಡಿಸ್ವಾರ್ಜ್ ಮಾಡಿ ಮನೆಗೆ ಕಳುಹಿಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಮಾಹಿತಿ ನೀಡಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ ಒಟ್ಟು 3057 ಕೊರೋನಾ ನಿಗಾ ಪ್ರಕರಣಗಳಿದ್ದು, 287 ಸ್ಯಾಂಪಲ್‌ ಟೆಸ್ಟ್ ಮಾಡಲಾಗಿದೆ. ಇದರಲ್ಲಿ 174 ನೆಗೆಟಿವ್ ಬಂದಿವೆ. 35 ಪ್ರಕರಣಗಳು ಪಾಸಿಟಿವ್ ಬಂದಿವೆ. ಇನ್ನೂ 70 ಪ್ರಕರಣಗಳ ವರದಿ ಬರಲು ಬಾಕಿಯಿದೆ. ಪ್ರಸ್ತುತ ಆಸ್ಪತ್ರೆಯಲ್ಲಿ 34 ಮಂದಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದೇಶದಿಂದ ಬಂದು ಮನೆಯಲ್ಲೇ 1533 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ. 1490 ಮಂದಿ 14 ದಿನಗಳ ಕಾಲ ಕ್ವಾರಂಟೈನ್ ಅವಧಿ ಮುಗಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!