newsics.com
ಬೆಂಗಳೂರು: ನಗರದಲ್ಲಿ ಕ್ಟೋಬರ್ 9ರ ಸಂಜೆ 4 ಗಂಟೆಯಿಂದ ಅಕ್ಟೋಬರ್ 10ರ ಬೆಳಗ್ಗೆ 6 ಗಂಟೆ ತನಕ ಎಂ. ಜಿ. ರಸ್ತೆ-ಬೈಯಪ್ಪನಹಳ್ಳಿ ನಡುವೆ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತವಾಗಲಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮ ಈ ಕುರಿತು ಪ್ರಕಟಣೆ ಹೊರಡಿಸಿದೆ. ಅಕ್ಟೋಬರ್ 9ರಂದು ನೇರಳೆ ಮಾರ್ಗದ ದುರಸ್ತಿ ಕಾಮಗಾರಿ ನಡೆಯಲಿದ್ದು, ಈ ಹಿನ್ನಲೆ ಎಂ. ಜಿ. ರಸ್ತೆ ಮತ್ತು ಬೈಯಪ್ಪನಹಳ್ಳಿ ನಡುವೆ ರೈಲು ಸಂಚಾರ ಇರುವುದಿಲ್ಲ.
ಕಾಮಗಾರಿ ಪೂರ್ಣಗೊಂಡ ಬಳಿಕ ಅಕ್ಟೋಬರ್ 10ರ ಭಾನುವಾರ ಬೆಳಗ್ಗೆ 6 ಗಂಟೆ ಬಳಿಕ ಮೆಟ್ರೋ ಸಂಚಾರ ಪ್ರಾರಂಭವಾಗಿಲಿದೆ.