newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಾದಕ ದ್ರವ್ಯ ನಿಯಂತ್ರಣ ಅಧಿಕಾರಿಗಳು ಅಪಾರ್ಟ್ ಮೆಂಟ್ ವೊಂದರ ಮೇಲೆ ದಾಳಿ ನಡೆಸಿದ್ದಾರೆ. ಯುವತಿಯರು ಮಾದಕ ದ್ರವ್ಯ ಸೇವಿಸುತ್ತಿದ್ದಾರೆ ಎಂಬ ಶಂಕೆ ಆಧಾರದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ವರದಿಯಾಗಿದೆ.
ಉತ್ತರ ಭಾರತ ಮೂಲದ ಮೂವರು ಯುವತಿಯರನ್ನು ವಶಕ್ಕೆ ಪಡೆಯಲಾಗಿದೆ. ಓರ್ವ ಯುವತಿ ಎಂ ಬಿ ಎ ಪದವೀಧರೆಯಾಗಿದ್ದು ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.
ಡಾರ್ಕ್ ವೆಬ್ ಮೂಲಕ ಯುವತಿ ಮಾದಕ ದ್ರವ್ಯ ಖರೀದಿಸುತ್ತಿದ್ದಳು ಎಂದು ಹೇಳಲಾಗುತ್ತಿದೆ. ಯುವತಿಯರ ವಿಚಾರಣೆ ಮುಂದುವರಿದಿದೆ