Monday, October 2, 2023

ಮೊಹರಂ, ಗಣೇಶ ಚತುರ್ಥಿ ಆಚರಣೆಗೆ ಹೊಸ ಮಾರ್ಗಸೂಚಿ ಪ್ರಕಟ

Follow Us

newsics.com
ಬೆಂಗಳೂರು: ಸಂಭವನೀಯ ಕೊರೋನಾ ಮೂರನೇ ಅಲೆ ಕಾರಣದಿಂದ ಮೊಹರಂ, ಗಣೇಶ ಚತುರ್ಥಿ ಸೇರಿದಂತೆ ಆಗಸ್ಟ್, ಸೆಪ್ಟೆಂಬರ್ ನಲ್ಲಿ ಬರುವ ಹಬ್ಬಗಳ ಆಚರಣೆಗೆ ರಾಜ್ಯಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ಮಾರ್ಗಸೂಚಿ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಮೆರವಣಿಗೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಗಣೇಶ ಮೂರ್ತಿ ತರುವಾಗ ಮತ್ತು ವಿಸರ್ಜನೆ ವೇಳೆ ಮೆರವಣಿಗೆಯನ್ನು ನಿಷೇಧಿಸಲಾಗಿದೆ. ದರ್ಶನಕ್ಕಾಗಿ ಬರುವ ಭಕ್ತರಿಗೆ ಕೋವಿಡ್-19 ಮಾರ್ಗಸೂಚಿಯಂತೆ ಕಡ್ಡಾಯ ಮಾಸ್ಕ್​​ ಧರಿಸಬೇಕು. ಕನಿಷ್ಠ 6 ಅಡಿ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ದೇವಾಲಯಗಳಲ್ಲಿ ಪ್ರತಿದಿನ ಸ್ಯಾನಿಟೈಸೇಷನ್ ಕಡ್ಡಾಯವಾಗಿದ್ದು, ಹೊರಾಂಗಣದಲ್ಲಿ ಚಪ್ಪರ, ಪೆಂಡಾಲ್, ಶಾಮಿಯಾನದ ವೇದಿಕೆ ನಿರ್ಮಿಸುವಂತಿಲ್ಲ ಎಂದು ಹೇಳಲಾಗಿದೆ.

ಇನ್ನು ಮೊಹರಂ ಆಚರಣೆ ವೇಳೆ ಪ್ರಾರ್ಥನಾ ಸಭೆ, ಮೆರವಣಿಗೆಗೆ ನಿಷೇಧಿಸಲಾಗಿದೆ. ದೈಹಿಕ ಅಂತರ ಪಾಲಿಸಿ ಕನಿಷ್ಠ ಸಂಖ್ಯೆಯಲ್ಲಿ ಭಾಗಿಯಾಗಬಹುದು. ಆದರೆ ಆಲಂ/ಪಂಜಾ, ತಾಜಿಯತ್​​ಗಳನ್ನು ಜನರು ಮುಟ್ಟುವಂತಿಲ್ಲ.10 ವರ್ಷದೊಳಗಿನವರು, 60 ವರ್ಷ ಮೇಲ್ಪಟ್ಟವರು ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಲು ಸೂಚನೆ ನೀಡಲಾಗಿದೆ.

 

ಆ.14ರಿಂದ ಜನಪ್ರಿಯ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮ ಆರಂಭ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನದ ತುರ್ತು ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ: ತುರ್ತು ಭೂ ಸ್ಪರ್ಶ, ಬಂಧನ

newsics.com ದೇವನಹಳ್ಳಿ: ಟೇಕ್ಆಫ್ ಆಗುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸ್ವಪ್ನೋಲ್...

ಸಾಮೂಹಿಕ ಪ್ರಾರ್ಥನೆ ವೇಳೆ ಚರ್ಚ್ ಛಾವಣಿ ಕುಸಿತ: 9 ಮಂದಿ ಸಾವು, 50 ಜನರಿಗೆ ಗಾಯ

newsics.com ಸಿಯುಡಾಡ್ ಮಡೆರೊ(ಮೆಕ್ಸಿಕೋ ಸಿಟಿ): ಭಾನುವಾರದ ಸಾಮೂಹಿಕ ಪ್ರಾರ್ಥನೆಯ ಸಮಯದಲ್ಲಿ ಚರ್ಚ್‌ನ ಛಾವಣಿ ಕುಸಿದು 9 ಜನರು ಸಾವನ್ನಪ್ಪಿದ್ದು, ಸುಮಾರು 50 ಜನರು ಗಾಯಗೊಂಡಿದ್ದಾರೆ. ಸುಮಾರು 30 ಮಂದಿ ಅವಶೇಷಗಳಡಿ ಸಿಕ್ಕಿಹಾಕಿಕೊಂಡಿದ್ದಾರೆ. ಉತ್ತರ ಮೆಕ್ಸಿಕೋದಲ್ಲಿ...

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ ನೀಡಿ ಮರುಜೀವ ನೀಡಿದ ಘಟನೆ ರಾಂಚಿ-ದೆಹಲಿ...
- Advertisement -
error: Content is protected !!