Monday, October 3, 2022

ಯಲ್ಲಾಪುರದಲ್ಲಿ ಹೊಸ ಪ್ರಭೇದದ ಏಡಿ ಪತ್ತೆ

Follow Us

newsics.com

ಕಾರವಾರ: ಸಿಹಿ ನೀರಿನಲ್ಲಿ ವಾಸಿಸುವ ಹೊಸ ಪ್ರಭೇದ ಏಡಿ ಯಲ್ಲಾಪುರ ತಾಲ್ಲೂಕಿನ ಬಾರೆ ಎಂಬಲ್ಲಿ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.

ದೇಹವು ಬಿಳಿ ಮತ್ತು ಕಾಲುಗಳು ನೇರಳೆ ಬಣ್ಣದಲ್ಲಿವೆ. ಇದಕ್ಕೆ  ಘಟಿಯಾನ ದ್ವಿವರ್ಣ (Ghatiana Dvivarna) ಎಂದು ಹೆಸರಿಡಲಾಗಿದೆ.

ಅರಣ್ಯ ಇಲಾಖೆಯ ಸಿಬ್ಬಂದಿ ಪರಶುರಾಮ ಭಜಂತ್ರಿ, ನಿಸರ್ಗ ತಜ್ಞರಾದ ಗೋಪಾಲಕೃಷ್ಣ ಹೆಗಡೆ, ಸಮೀರಕುಮಾರ ಪಾಟಿ ಮತ್ತು ತೇಜಸ್ ಥಾಕರೆ ಅವರು ಕಳೆದ ವರ್ಷ ಜೂನ್‌ನಲ್ಲಿ ಹಿಂದೆ ಈ ಏಡಿಯನ್ನು ಕಂಡಿದ್ದರು. ಬಳಿಕ ವಿವಿಧ ರೀತಿಯಲ್ಲಿ ಅಧ್ಯಯನ ಮಾಡಿದಾಗ ಹೊಸ ಪ್ರಭೇದವೆಂಬುದು ದೃಢಪಟ್ಟಿತು.

ಪಶ್ಚಿಮ ಘಟ್ಟದಲ್ಲಿ ಕಂಡುಬಂದಿರುವ ಅಪರೂಪದ ಏಡಿಗಳನ್ನು ‘ಘಟಿಯಾನ’ ಶಬ್ದದೊಂದಿಗೆ ಗುರುತಿಸಲಾಗುತ್ತದೆ. ಈ ಪ್ರಭೇದದಲ್ಲಿ ಈಗಾಗಲೇ 13 ವಿವಿಧ ಜಾತಿಯ ಸಿಹಿ ನೀರಿನ ಏಡಿಗಳನ್ನು ಪತ್ತೆ ಹಚ್ಚಲಾಗಿದೆ. ‘ದ್ವಿವರ್ಣ’ವು 14ನೆಯದ್ದಾಗಿದೆ ಎಂದು ಜೀವವೈವಿಧ್ಯ ಸಂಶೋಧಕ ಮಂಜುನಾಥ ಎಸ್.ನಾಯಕ  ಮಾಹಿತಿ ನೀಡಿದ್ದಾರೆ.

ಮ್ಯಾಂಚೆಸ್ಟರ್ ಯುನೈಟೆಡ್ ಖರೀದಿಸುತ್ತೇನೆ ಎಂದಿದ್ದು ತಮಾಷೆಗೆ: ಎಲಾನ್ ಮಸ್ಕ್

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!