ಬೆಂಗಳೂರು: ಹೊಸ ವರ್ಷವನ್ನು ರಾಜ್ಯದ ಎಲ್ಲೆಡೆ ಸಂಭ್ರಮ ಸಡಗರದಿಂದ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಬೆಂಗಳೂರು, ಮೈಸೂರು, ಧಾರವಾಡ, ದಾವಣಗೆರೆ, ಕಲಬುರಗಿ, ಬಾಗಲಕೋಟೆ, ಬೆಳಗಾವಿ ಸೇರಿ ರಾಜ್ಯದ ಎಲ್ಲೆಡೆ ಹೊಸ ವರ್ಷಾಚರಣೆ ಜೋರಾಗಿಯೇ ನಡೆಯಿತು.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಬೆಂಗಳೂರಿನ ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಂತೂ ಪೊಲೀಸ್ ಸರ್ಪಗಾವಲನ್ನೇ ಹಾಕಲಾಗಿತ್ತು. ಕೋರಮಂಗಲ ಠಾಣೆ ವ್ಯಾಪ್ತಿಯಲ್ಲಿ ಕೆಲ ಕಿಡಿಗೇಡಿಗಳು ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ದೂರಿ ಮಹಿಳೆಯೊಬ್ಬರು ಕಣ್ಣೀರಿಟ್ಟಿದ್ದಾರೆ. ಈ ಸಂಬಂಧ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿತ್ತು.
ಈ ಮಧ್ಯೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಡಿನ ಜನತೆಗೆ ಶುಭ ಕೋರಿದ್ದು, ಸಿಹಿನೆನಪುಗಳೊಂದಿಗೆ 2019 ಕ್ಕೆ ವಿದಾಯ ಹೇಳಿ ಹೊಸ ವರ್ಷವನ್ನು ಸ್ವಾಗತಿಸೋಣ ಎಂದು ಟ್ವೀಟ್ ಮಾಡಿದ್ದಾರೆ.
ಹೊಸ ವರ್ಷಕ್ಕೆ ಸ್ವಾಗತ, ಎಲ್ಲೆಡೆ ಕಟ್ಟೆಚ್ಚರ
Follow Us