newsics.com
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ. ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ಇಂದು ಕೂಡ ರಜೆ ಘೋಷಿಸಲಾಗಿದೆ. ಕಾಳಿ, ಅಫನಾಶಿನಿ ಸೇರಿದಂತೆ ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆ ಎಂದಿನಂತೆ ಮುಂದುವರಿದಿದೆ. ಬಂಟ್ವಾಳ ಸಮೀಪ ಗುಡ್ಡ ಕುಸಿತ ಸಂಭವಿಸಿದೆ. ಹಾಸನ ಜಿಲ್ಲೆಯ ಅರಕಲಗೂಡು ಮತ್ತು ಸಕಲೇಶಪುರದಲ್ಲಿ ಉತ್ತಮ ಮಳೆಯಾಗುತ್ತಿದೆ.