Tuesday, August 9, 2022

ಬೆಂಗಳೂರು ಹಿಂಸಾಚಾರ: ತನಿಖೆಗೆ ಎನ್ ಐ ಎ ಎಂಟ್ರಿ

Follow Us

ಬೆಂಗಳೂರು: ನಗರದ ಕೆ ಜಿ. ಹಳ್ಳಿ ಮತ್ತು ಡಿ. ಜೆ. ಹಳ್ಳಿಯಲ್ಲಿ ನಡೆದ ಗಲಭೆ ಕುರಿತ ತನಿಖೆಗೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಕೂಡ ಮುಂದಾಗಿದೆ. ಈ ಸಂಬಂಧ ಈಗಾಗಲೆ ತನಿಖೆ ನಡೆಸಿರುವ ಬೆಂಗಳೂರು ಪೊಲೀಸರಿಂದ ತನಿಖಾ ಸಂಸ್ಥೆ ಅಗತ್ಯ ಮಾಹಿತಿ ಕಲೆ ಹಾಕಿದೆ.

ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಯ ಮೇಲೆ ದಾಳಿ ಹಾಗೂ ನಂತರದ ಬೆಳವಣಿಗೆಯ ಇಂಚು ಇಂಚು ಮಾಹಿತಿಯನ್ನು ಎನ್ ಐ ಎ ಕಲೆ ಹಾಕಲಿದೆ.

ಇದೀಗ ದೊರೆತಿರುವ ಮಾಹಿತಿಗಳನ್ನು ವಿಶ್ಲೇಷಿಸಿ ಮುಂದಿನ ತನಿಖಾ ಸ್ವರೂಪವನ್ನು ಎನ್ ಐ ಎ ನಿರ್ಧರಿಸಲಿದೆ. ಗಲಭೆಗೆ ನಿಜವಾದ ಕಾರಣ ಏನು, ಅದರಲ್ಲಿ ಎಸ್ ಡಿ ಪಿ ಐ ಯ ಪಾತ್ರ ಮತ್ತು ಅದರ ಹಿಂದಿರುವ ಆರ್ಥಿಕ ಮೂಲ ಯಾವುದು ಎಂಬ ಕುರಿತು ಎನ್ ಐ ಎ ಗಮನ ಕೇಂದ್ರೀಕರಿಸಲಿದೆ.

ರಾಷ್ಟ್ರೀಯ ತನಿಖಾದಳ ಮುಖ್ಯವಾಗಿ ಭಯೋತ್ಪಾದನಾ ಚಟುವಟಿಕೆ ಕುರಿತ ಪ್ರಕರಣಗಳ ತನಿಖೆ ನಡೆಸುತ್ತಿದೆ. ಆರೋಪಿಗಳ ಸಂಪನ್ಮೂಲದ ಮೂಲದ ಬಗ್ಗೆ ಎನ್ ಐ ಎ ಗಮನ ಹರಿಸಲಿದೆ. ಬೆಂಗಳೂರಿನಲ್ಲಿ ಈ ಹಿಂದೆ ನಡೆದ ಬಾಂಬ್ ಸ್ಫೋಟಕ್ಕೆ ನೆರೆಯ ತಮಿಳುನಾಡು ಮತ್ತು ಕೇರಳದ ಜತೆ ಸಂಪರ್ಕ ಇದ್ದ ಅಂಶ ತನಿಖೆಯಲ್ಲಿ ಬಯಲಾಗಿತ್ತು. ಇದೀಗ ಹಿಂಸಾಚಾರದ ಕುರಿತು ಎಲ್ಲ ಆಯಾಮಗಳೊಂದಿಗೆ ತನಿಖೆ ನಡೆಸಲು ಎನ್ ಐ ಎ ಮುಂದಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

newsics.com ಬೆತುಲ್(ಮಧ್ಯಪ್ರದೇಶ): ಮಹಿಳೆಯರು ಮತ್ತು ಯುವತಿಯರ ಎದುರು ಅಶ್ಲೀಲವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಊರಿನ ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. ಈ‌...

ಹಾವಿಗೆ ಹಾಲಲ್ಲ, ರಕ್ತಾಭಿಷೇಕ!

newsics.com ವಿಜಯನಗರ: ಶ್ರಾವಣ ಮಾಸದ ಎರಡನೇ ಭಾನುವಾರ ನಾಗರ ಹುತ್ತಕ್ಕೆ ಪೂಜೆ ಮಾಡಿ ರಕ್ತಾಭಿಷೇಕ ಮಾಡುವ ವಿಶೇಷ ಆಚರಣೆ ವಿಜಯನಗರದ ಕೂಡ್ಲಿಗಿ ತಾಲೂಕಿನ ಬತ್ತನ ಹಳ್ಳಿಯಲ್ಲಿದೆ. ಕೊರಚ ಮತ್ತು‌ ಕೊರಮ ಸಮುದಾಯದ ಜನರು ನಾಗರ ಪಂಚಮಿ...

ಯಾವುದೇ ಕಾರಣಕ್ಕೂ ಆಧಾರ್ ಒಟಿಪಿ ಶೇರ್ ಮಾಡಬೇಡಿ: ಸರ್ಕಾರದ ಎಚ್ಚರಿಕೆ

newsics.com ಬೆಂಗಳೂರು: ಆಧಾರ್ ಒಟಿಪಿ, ವೈಯಕ್ತಿಕ ಕಾರ್ಡ್ ವಿವರಗಳನ್ನು ಬಹಿರಂಗಪಡಿಸಬಾರದು ಎಂದು ಸರ್ಕಾರ ಎಚ್ಚರಿಸಿದೆ. ನಿಮ್ಮ ಆಧಾರ್ ಒಟಿಪಿಯನ್ನು ಕೇಳಿ ನಿಮಗೆ ಎಂದಿಗೂ ಕರೆ, SMS ಅಥವಾ ಇಮೇಲ್ ಬರುವುದಿಲ್ಲ ಎಂದು ಆಧಾರ್ ಕಾರ್ಡ್ ಸುರಕ್ಷತೆ...
- Advertisement -
error: Content is protected !!