ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಹಿನ್ನೆಲೆಯಲ್ಲಿ ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಮಾಹಿತಿ ಕಲೆ ಹಾಕಲು ರಾಷ್ಟ್ರೀಯ ತನಿಖಾ ದಳದ ತಂಡ ಮಂಗಳೂರಿಗೆ ಆಗಮಿಸಿದೆ. ನಾಲ್ಕು ಮಂದಿ ಅಧಿಕಾರಿಗಳನ್ನೊಳಗೊಂಡ ತಂಡ ಸಮಗ್ರ ಮಾಹಿತಿ ಕಲೆ ಹಾಕಲಿದೆ. ಸ್ಛಳೀಯ ಪೊಲೀಸರಿಗೆ ಕೂಡ ಮಾರ್ಗದರ್ಶನ ನೀಡಲಿದೆ. ಬಾಂಬ್ ಪತ್ತೆ ಪ್ರಕರಣವನ್ನು ಕೇಂದ್ರ ಸರ್ಕಾರ ಕೂಡ ಗಂಭೀರವಾಗಿ ಪರಿಗಣಿಸಿದ್ದು, ಸಮಗ್ರ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.