Wednesday, November 30, 2022

ನೈಸ್ ಮಾನನಷ್ಟ ಮೊಕದ್ದಮೆ: 2 ಕೋಟಿ‌ ರೂ.‌ ಪರಿಹಾರ ನೀಡಲು ದೇವೇಗೌಡರಿಗೆ ಕೋರ್ಟ್ ಆದೇಶ

Follow Us

newsics.com
ಬೆಂಗಳೂರು: ಮಾನನಷ್ಟ ಮೊಕದ್ದಮೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2 ಕೋಟಿ ರೂ. ನಷ್ಟ ಪರಿಹಾರ ನೀಡುವಂತೆ ಸಿಟಿ ಸಿವಿಲ್‌ ಕೋರ್ಟ್ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಆದೇಶಿಸಿದೆ.
ನೈಸ್ (ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್’ಪ್ರೈಸಸ್) ಸಂಸ್ಥೆ ಹೂಡಿದ್ದ ಮಾನನಷ್ಟ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಈ‌ ಆದೇಶ ನೀಡಿದೆ. ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು, ಸಂಸ್ಥೆಯ ಗೌರವಕ್ಕೆ ಧಕ್ಕೆ ಬರುವಂತೆ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ನೈಸ್ ಸಂಸ್ಥೆ 2012ರಲ್ಲಿ ಸಿವಿಲ್ ಮಾನನಷ್ಟ ಮೊಕದ್ದಮೆ ದಾಖಲಿಸಿತ್ತು. ಸಂಸ್ಥೆಯ ವರ್ಚಸ್ಸು ಹಾಗೂ ಗೌರವಕ್ಕೆ ಹಾನಿ ಮಾಡಿರುವುದಕ್ಕೆ 10 ಕೋಟಿ ಪರಿಹಾರ ಕೊಡಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿತ್ತು.

ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶರಾದ ಮಲ್ಲನಗೌಡ ಅವರು 2 ಕೋಟಿ ನಷ್ಟ ಪರಿಹಾರ ನೀಡುವಂತೆ ದೇವೇಗೌಡರಿಗೆ ಆದೇಶಿಸಿದ್ದಾರೆ.

ಸಂಸ್ಥೆಯ ವಿರುದ್ಧ ಮಾಡಿದ್ದ ಆರೋಪಗಳನ್ನು ಸಾಬೀತು ಮಾಡುವಲ್ಲಿ ಎಚ್.ಡಿ ದೇವೇಗೌಡರು ವಿಫಲರಾದ ಹಿನ್ನೆಲೆಯಲ್ಲಿ ನಷ್ಟ ಪರಿಹಾರವನ್ನು ಸಂಸ್ಥೆಗೆ ನೀಡುವಂತೆ ನ್ಯಾಯಾಲಯ ಈ ಆದೇಶ ನೀಡಿದೆ.

ಅನ್’ಲಾಕ್ ಎಫೆಕ್ಟ್: ಒಂದೇ ದಿನ ಬೆಂಗಳೂರಿನ‌ 2 ಕಡೆ ಸರಗಳ್ಳತನ

ಅಂದು ಆಕ್ಸಿಜನ್ ಪೈಪ್ ಹಾಕಿಕೊಂಡೇ ಸಂಗೀತ ಕಛೇರಿ ನಡೆಸಿಕೊಟ್ಟಿದ್ದ ಸಿತಾರ್ ಮಾಂತ್ರಿಕ!

ಮತ್ತಷ್ಟು ಸುದ್ದಿಗಳು

vertical

Latest News

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...
- Advertisement -
error: Content is protected !!