newsics.com
ಬೆಂಗಳೂರು: ಕೊರೋನಾ ಮಹಾ ಮಾರಿ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ವಿಸ್ತರಿಸಲಾಗಿದೆ. ಅಕ್ಟೋಬರ್ 25ರ ತನಕ ರಾತ್ರಿ ಕರ್ಫ್ಯೂ ಜಾರಿಯಲ್ಲಿ ಇರಲಿದೆ.
ರಾತ್ರಿ 10ಗಂಟೆಯಿಂದ ಬೆಳಗ್ಗೆ 5 ಗಂಟೆ ತನಕ ಸಂಚಾರ ನಿರ್ಬಂಧ ಜಾರಿಯಲ್ಲಿ ಇರಲಿದೆ.
ಸಾಲು ಸಾಲು ಹಬ್ಬಗಳು ಇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾತ್ರಿ ಕರ್ಫ್ಯೂ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ವರದಿಯಾಗಿದೆ.