newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ವೀಕೆಂಡ್ ಕರ್ಪ್ಯೂ ಜಾರಿಯಾಗುವ ಸಾಧ್ಯತೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಕೊರೋನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಈ ಸಂಬಂಧ ಚಿಂತನೆ ನಡೆಸಿದೆ. ಪಾಲಿಯೆ ಆಯುಕ್ತ ಗೌರವ ಗುಪ್ತಾ ಕೂಡ ಈ ಸುಳಿವು ನೀಡಿದ್ದಾರೆ.
ಇಂದು ಸಿಎಂ ನೇತೃತ್ವದಲ್ಲಿ ಈ ಸಂಬಂಧ ಉನ್ನತ ಮಟ್ಟದ ಸಭೆ ಕೂಡ ನಡೆಯಲಿದೆ. ಬೆಂಗಳೂರಿನಲ್ಲಿ ಕಠಿಣ ಕ್ರಮ ಅನಿವಾರ್ಯ ಎಂದು ತಜ್ಞರ ಸಮಿತಿ ಶಿಫಾರಸು ಮಾಡಿದೆ.
ಬೆಂಗಳೂರಿನಲ್ಲಿ ಕಳೆದ 11 ದಿನಗಳಲ್ಲಿ 500ಕ್ಕೂ ಹೆಚ್ಚು ಮಕ್ಕಳಲ್ಲಿ ಕೊರೋನಾ ಸೋಂಕು ಕಂಡು ಬಂದಿದೆ.
ಬೆಂಗಳೂರಿನಲ್ಲಿ 543 ಮಕ್ಕಳಿಗೆ ಕೊರೋನಾ ಸೋಂಕು: ಬಿಬಿಎಂಪಿ ಅಧಿಕೃತ ಮಾಹಿತಿ