newsics.com
ಬೆಂಗಳೂರು: ಬಿಜೆಪಿ ತತ್ವಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷವಾಗಿದ್ದು, ರೌಡಿಗಳಿಗೆ , ಪಾತಕಿಗಳಿಗೆ ಅವಕಾಶ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಕುಖ್ಯಾತ ಪಾತಕಿ ಸೈಲೆಂಟ್ ಸುನಿಲ್ ಜತೆ ಬಿಜೆಪಿ ಸಂಸದರು ಮತ್ತು ಶಾಸಕರು ವೇದಿಕೆ ಹಂಚಿಕೊಂಡ ಬಳಿಕ ಭಾರೀ ಕೋಲಾಹಲವೇ ಸೃಷ್ಟಿಯಾಗಿದೆ.
ಈ ಹಿನ್ನೆಲೆಯಲ್ಲಿ ಸಿಎಂ ಈ ಸ್ಪಷ್ಟೀಕರಣ ನೀಡಿದ್ದಾರೆ.
ಬೆಂಗಳೂರಿನಲ್ಲಿ ಕೊಳಗೇರಿಯಲ್ಲಿ ಇರುವ ಮತದಾರರ ಮೇಲೆ ಪಾತಕಿಗಳು ಪ್ರಭಾವ ಹೊಂದಿರುತ್ತಾರೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಚುನಾವಣೆ ಹತ್ತಿರ ಬಂದಾಗ ಪಾತಕಿಗಳಿಗೆ ಮಣೆಹಾಕುತ್ತಿವೆ.