ಬೆಂಗಳೂರು: ರಾಜಧಾನಿ ಬೆಂಗಳೂರು ಮಹಾನಗರಪಾಲಿಕೆ ಆಯುಕ್ತ ಸ್ಥಾನದಿಂದ ತಮ್ಮನ್ನು ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯ ಮೊರೆ ಹೋಗಲಿದ್ದೇನೆ ಎಂಬ ವರದಿಗಳನ್ನು ಮಾಜಿ ಆಯುಕ್ತ ಅನಿಲ್ ಕುಮಾರ್ ನಿರಾಕರಿಸಿದ್ದಾರೆ. ಇದು ಸತ್ಯಕ್ಕೆ ದೂರವಾದ ಮಾತು ಎಂದು ಅವರು ಹೇಳಿದ್ದಾರೆ.
ಟ್ವೀಟರ್ ಮೂಲಕ ಅನಿಲ್ ಕುಮಾರ್ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ದಿಢೀರ್ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಅನಿಲ್ ಕುಮಾರ್ ಅವರನ್ನು ವರ್ಗಾಯಿಸಿ ಮಂಜುನಾಥ್ ಪ್ರಸಾದ್ ಅವರನ್ನು ನೂತನ ಆಯುಕ್ತರನ್ನಾಗಿ ನೇಮಕ ಮಾಡಿತ್ತು.
ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಿಸಲು ವಿಫಲರಾದ್ದದೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಇದೇ ವೇಳೆ ಆಯುಕ್ತರಾಗಿದ್ದ ಸಂದರ್ಭದಲ್ಲಿ ಅನಿಲ್ ಕುಮಾರ್ ಅವರು ತಮ್ಮ ಇತಿಮಿತಿಯೊಳಗೆ ಉತ್ತಮ ಕೆಲಸ ಮಾಡಿದ್ದಾರೆ ಎಂಬ ಅಭಿಪ್ರಾಯ ಕೂಡ ಕೇಳಿ ಬಂದಿದೆ.