ಬೆಂಗಳೂರು: ಶಾಲಾ ಪಠ್ಯದಿಂದ ಟಿಪ್ಪು ಸುಲ್ತಾನ್ ಕುರಿತ ಅಧ್ಯಾಯಗಳನ್ನು ತೆಗೆಯಬೇಕು ಎಂಬ ಒತ್ತಾಯದ ನಡುವೆಯೇ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ತರಾತುರಿಯ ಹೆಜ್ಜೆ ಇಡದಿರಲು ನಿರ್ಧರಿಸಿದೆ.
ಈ ಸಂಬಂಧ ಸ್ಪಷ್ಟನೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕೂಡ ಪಠ್ಯಗಳಿಂದ ಟಿಪ್ಪು ಕುರಿತು ಅಧ್ಯಾಯ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ ಎಂದಿದ್ದಾರೆ. ಟಿಪ್ಪು ಪಠ್ಯದ ಕುರಿತು ವಿಸ್ತೃತ ಚರ್ಚೆಯಾಗಬೇಕಿದ್ದು, ಅದಕ್ಕೆ ಪ್ರತ್ಯೇಕ ಸಮಿತಿ ರಚಿಸಬೇಕು ಎಂದು ಡಿಎಸ್ ಇಆರ್ ಟಿ ತಜ್ಞರ ಸಮಿತಿ ಶಿಫಾರಸ್ಸು ಮಾಡಿದೆ. ಅದಕ್ಕೆ ಹೆಚ್ಚಿನ ಕಾಲಾವಕಾಶದ ಅಗತ್ಯವಿದೆ ಎಂದಿದ್ದಾರೆ.