newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಬೆಂಗಳೂರಿನಲ್ಲೂ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಲೇ ಇದೆ.
ಆದರೆ, ಕೊರೋನಾ ಸೋಂಕಿತರಿಗೆ ಹಾಸಿಗೆ ನೀಡದ ನಗರದ 36 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ಶೋಕಾಸ್ ನೋಟಿಸ್ ನೀಡಿದೆ. ಕೊರೋನಾ ರೋಗಿಗಳಿಗೆ ಹಾಸಿಗೆ ನೀಡುವಂತೆ ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಾಗಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಕೆಲವು ಖಾಸಗಿ ಆಸ್ಪತ್ರೆಗಳು ಮಾತ್ರ ಕೊರೋನಾ ರೋಗಿಗಳಿಗೆ ಬೆಡ್ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ 36 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ಶೋಕಾಸ್ ನೋಟಿಸ್ ನೀಡಿದ್ದು, ಸೂಕ್ತ ಕಾರಣ ನೀಡುವಂತೆ ಖಡಕ್ ಸೂಚನೆ ನೀಡಿದೆ.
ಕೊರೋನಾ ಸೋಂಕಿತರಿಗೆ ಹಾಸಿಗೆ ನೀಡದ 36 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್
Follow Us