ಬೆಂಗಳೂರು: ತರಗತಿಯಲ್ಲಿ ನೀತಿ ಪಾಠ ಹೇಳಿಕೊಡಬೇಕಾದ ಶಿಕ್ಷಕಿಯರೇ ಅಶ್ಲೀಲ ಹಾಡಿಗೆ ನೃತ್ಯ ಮಾಡಿದ ಪ್ರಕರಣವನ್ನು ಶಿಕ್ಷಣ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಬೆಂಗಳೂರು ಸಮೀಪದ ಶಾಲೆಯಲ್ಲಿನ ನೃತ್ಯ ಈಗಾಗಲೇ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಸ್ಪಷ್ಟೀಕರಣ ಕೋರಿ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.