newsics.com
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಸಿದ್ದತೆ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ವರ್ಗಾವಣೆ ಸಂಬಂಧ ಜಾರಿಯಲ್ಲಿ ಇರುವ ಮಾರ್ಗಸೂಚಿ ಕ್ರಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದೆ.
ಮೂರು ವರ್ಷಕ್ಕಿಂತ ಹೆಚ್ಚು ಒಂದೇ ಜಿಲ್ಲೆಯಲ್ಲಿ ಇರುವ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಸೂಚಿಸಿದೆ. ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ಅಧಿಕಾರಿಗಳಿಗೆ ಜವಾಬ್ದಾರಿ ನೀಡದಂತೆ ಚುನಾವಣಾ ಆಯೋಗ ಸೂಚಿಸಿದೆ.
ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುವ ಮೊದಲೇ ಅಧಿಕಾರದಲ್ಲಿರುವ ಪ್ರತಿ ರಾಜಕೀಯ ಪಕ್ಷ ಹಿರಿಯ ಅಧಿಕಾರಿಗಳ ಸಾಮೂಹಿಕ ವರ್ಗಾವಣೆ ಮಾಡುವುದು ಸಾಮಾನ್ಯವಾಗಿದೆ