Monday, April 12, 2021

ಇಂದಿನಿಂದ 4 ನಗರಗಳಲ್ಲಿ ಓಲಾ ಕ್ಯಾಬ್ ಸಂಚಾರ ಆರಂಭ

ಬೆಂಗಳೂರು: ಮಂಗಳವಾರದಿಂದ (ಮೇ 19) ಬೆಂಗಳೂರು, ಮೈಸೂರು ಸೇರಿ ಕರ್ನಾಟಕdದ ನಾಲ್ಕು ನಗರಗಳಲ್ಲಿ ಓಲಾ ಕ್ಯಾಬ್ ಸಂಚಾರ ಆರಂಭಿಸಲಿವೆ.
ಬೆಂಗಳೂರು, ಮೈಸೂರು, ಮಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡಗಳಲ್ಲಿ ಉನ್ನತ ಮಟ್ಟದ ಸುರಕ್ಷತಾ ಮುನ್ನೆಚ್ಚರಿಕೆಗಳೊಂದಿಗೆ ಸೇವೆ ಒದಗಿಸಲಾಗುತ್ತದೆ. ನಗರದೊಳಗಿನ ಪ್ರಯಾಣಕ್ಕಾಗಿ ಕ್ಯಾಬ್‌ಗಳು ಮತ್ತು ಆಟೋರಿಕ್ಷಾಗಳನ್ನು ಕಾಯ್ದಿರಿಸಲು ಸಾಧ್ಯವಾಗುತ್ತದೆ ಎಂದು ಓಲಾ ಪ್ರಕಟಣೆಯಲ್ಲಿ ತಿಳಿಸಿದೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ ಸುಮಾರು ಒಂದೂವರೆ ತಿಂಗಳಿಂದ ಕ್ಯಾಬ್ ಸೇವೆ ನಿಷೇಧಿಸಲಾಗಿತ್ತು. ಈಗ ರಾಜ್ಯ ಸರ್ಕಾರ ಕ್ಯಾಬ್ ಸಂಚಾರಕ್ಕೆ ಅನುಮತಿ ನೀಡಿರುವುದರಿಂದ ಮೇ 19 ರಿಂದ ರಾಜ್ಯದ ನಾಲ್ಕು ನಗರಗಳಲ್ಲಿ ಓಲಾ ಸಂಚಾರ ಆರಂಭಿಸಲಿದೆ. ಓಲಾ ಕ್ಯಾಬ್ ಅಲ್ಲದೆ ಇತರ ಕ್ಯಾಬ್ ಸೇವೆಗಳೂ ಆರಂಭವಾಗಲಿವೆ ಎಂದು ತಿಳಿದುಬಂದಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!