Saturday, April 17, 2021

ಬೆಂಗಳೂರಿನಲ್ಲಿ ಕೊರೋನಾಕ್ಕೆ ಮತ್ತೊಬ್ಬಎಎಸ್ಐ ಬಲಿ

ಬೆಂಗಳೂರು: ಮಾರಕ ಕೊರೋನಾ ಬೆಂಗಳೂರಿನಲ್ಲಿ ಎಎಸ್ಐ ಯೊಬ್ಬರನ್ನು  ಬಲಿಪಡೆದುಕೊಂಡಿದೆ. ವಿಧಾನಸಭೆಯ ಭದ್ರತಾ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ 57 ವರ್ಷ ಪ್ರಾಯದ ಎಎಸ್ಐ ಚಿಕಿತ್ಸೆ ಫಲಕಾರಿಯಾಗದೆ ಇಂದು ಅಸುನೀಗಿದ್ದಾರೆ. ಮೂರು ದಿನಗಳ ಹಿಂದೆ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು.  ಅವರು ಮಧುಮೇಹದಿಂದ ಕೂಡ ಬಳಲುತ್ತಿದ್ದರು ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ಕೊರೋನಾ ಇದುವರೆಗೆ  ಮೂವರು ಎಎಸ್ಐ ಅಧಿಕಾರಿಗಳನ್ನು ಬಲಿಪಡೆದಿದೆ. ಇದೇ ವೇಳೆ ಬೆಂಗಳೂರಿನಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳು ಹಿಂದೇಟು ಹಾಕುತ್ತಿವೆ ಎಂಬ ಆರೋಪ ಕೇಳಿ ಬಂದಿದೆ. ಇಂದು ಕೂಡ 64 ವರ್ಷ ಪ್ರಾಯದ ಮಹಿಳೆಯೊಬ್ಬರು  ಆಸ್ಪತ್ರೆಗಳ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾರೆ  ಎಂದು ಆರೋಪಿಸಲಾಗಿದೆ

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!