ಬೆಂಗಳೂರು: ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಮತ್ತೊಬ್ಬ ವಿದೇಶಿ ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದಾರೆ. ಪೊಲೀಸರ ಬಲೆಗೆ ಬಿದ್ದಿರುವ ಆರೋಪಿಯನ್ನು ನೈಜೀರಿಯಾ ಮೂಲದ ಒಸಿ ಎಂದು ಗುರುತಿಸಲಾಗಿದೆ. ಆರೋಪಿ ಒಸಿ ಈಗಾಗಲೇ ಸಿಸಿಬಿ ಬಂಧಿಸಿರುವ ಸೈಮನ್ ಸಹಚರ ಎಂದು ತಿಳಿದುಬಂದಿದೆ.
ಬಂಧಿತ ಆರೋಪಿಯಿಂದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ಎಂಡಿಎಂಎ ಮಾತ್ರೆಗಳು ಇದರಲ್ಲಿ ಸೇರಿವೆ. ಮುಖ್ಯವಾಗಿ ವಿದ್ಯಾರ್ಥಿಗಳಿಗೆ ಆರೋಪಿ ಒಸಿ ಮಾದಕ ದ್ರವ್ಯ ಪೂರೈಸುತ್ತಿದ್ದ ಎಂದು ಶಂಕಿಸಲಾಗಿದೆ.