ಮಂಗಳೂರು: ಮಾದಕ ದ್ರವ್ಯ ಜಾಲದ ತನಿಖೆ ನಡೆಸುತ್ತಿರುವ ಮಂಗಳೂರು ಸಿಸಿಬಿ ಮತ್ತೊಬ್ಬ ಡ್ರಗ್ ಪೆಡ್ಲರನ್ನು ಬಂಧಿಸಿದೆ. ಬಂಧಿತ ಆರೋಪಿಯನ್ನು ಮೊಹಮ್ಮದ್ ಶಾಕೀರ್ ಎಂದು ಗುರುತಿಸಲಾಗಿದೆ.
ಮೊಹಮ್ಮದ್ ಶಾಕೀರ್, ಈಗಾಗಲೇ ಸಿಸಿಬಿ ಬಂಧನದಲ್ಲಿರುವ ಕಿಶೋರ್ ಶೆಟ್ಟಿಯ ನಿಕಟವರ್ತಿ ಎಂದು ಆರೋಪಿಸಲಾಗಿದೆ. ಎಲ್ಲರೂ ಜತೆಯಲ್ಲಿ ಮಾದಕ ದ್ರವ್ಯ ಮಾರಾಟದಲ್ಲಿ ನಿರತರಾಗಿದ್ದರು ಎಂದು ಆರೋಪಿಸಲಾಗಿದೆ.