Newsics.com
ಬೆಂಗಳೂರು: ಮಾದಕ ದ್ರವ್ಯ ಜಾಲದ ತನಿಖೆ ನಡೆಸುತ್ತಿರುವ ಸಿಸಿಬಿ, ಮತ್ತೊಬ್ಬ ಡ್ರಗ್ಸ್ ಪೆಡ್ಲರನ್ನು ಬಂಧಿಸಿದೆ. ಬಂಧಿತ ಆರೋಪಿಯನ್ನು ಸುಜಯ್ ಎಂದು ಗುರುತಿಸಲಾಗಿದೆ. ಡಾರ್ಕ್ ನೆಟ್ ಮೂಲಕ ಆರೋಪಿ ಮಾದಕ ದ್ರವ್ಯ ಖರೀದಿಸುತ್ತಿದ್ದ ಎಂದು ಆರೋಪಿಸಲಾಗಿದೆ.
ಬಿಟ್ ಕಾಯಿನ್ ಬಳಸಿ ಈ ಅಕ್ರಮ ವ್ಯವಹಾರ ಮಾಡುತ್ತಿದ್ದ ಎಂದು ಸಿಸಿಬಿ ಮೂಲಗಳು ಹೇಳಿವೆ. 15 ಲಕ್ಷ ರೂಪಾಯಿ ಮೌಲ್ಯದ ಮಾದಕ ದ್ರವ್ಯ ವಶಪಡಿಸಿಕೊಳ್ಳಲಾಗಿದೆ.
ಸಿಸಿಬಿಯ ಹಿರಿಯ ಅಧಿಕಾರಿಗಳು ಆರೋಪಿ ಸುಜಯ್ ವಿಚಾರಣೆ ನಡೆಸುತ್ತಿದ್ದು, ಮಹತ್ವದ ಮಾಹಿತಿ ದೊರೆಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.