ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರಿಸಿದ್ದ ಶಂಕಿತ ಆರೋಪಿ ಅದಿತ್ಯ ರಾವ್ ವಿರುದ್ಧ ಪೊಲೀಸರು ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದಾನೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ. ಪತ್ರಿಕಾಗೋಷ್ಟಿಯಲ್ಲಿ ಆದಿತ್ಯ ಕುರಿತಂತೆ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಡಾ. ಪಿ. ಎಸ್. ಹರ್ಷಾ , ಆರೋಪಿ ಆದಿತ್ಯ ಬಾಂಬ್ ತಯಾರಿಕೆಯ ಕುರಿತಂತೆ ಅಪಾಯಕಾರಿ ಮಾಹಿತಿ ಹೊಂದಿದ್ದ ಎಂದು ಹೇಳಿದ್ದಾರೆ.