Tuesday, April 13, 2021

ಮೇ ಅಂತ್ಯದಿಂದ ರಾಜ್ಯದ ಪ್ರಮುಖ ದೇಗುಲಗಳಲ್ಲಿ ಆನ್ಲೈನ್ ಪೂಜೆ

ಬೆಂಗಳೂರು: ರಾಜ್ಯದ ಪ್ರಮುಖ ದೇಗುಲಗಳಲ್ಲಿ ನಡೆಯುವ ಪೂಜೆಯನ್ನು ಮೇ ಅಂತ್ಯದಿಂದ ಆನ್‌ ಲೈನ್‌ ಮೂಲಕವೇ ನೋಡಬಹುದು. ಪೂಜೆ ಸಲ್ಲಿಸಬಹುದು. ಮನೆ ಬಾಗಿಲಲ್ಲೇ ಪ್ರಸಾದವನ್ನೂ ಪಡೆಯಬಹುದು.
ಭಕ್ತರಿಗೆ ಖುಷಿ ಕೊಡುವ ಇಂತಹದೊಂದು ಮಾಹಿತಿಯನ್ನು ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ಆಯಾ ದೇವಸ್ಥಾನಗಳ ವೆಬ್‌ಸೈಟ್ ಮತ್ತು ಫೇಸ್ ಬುಕ್ ಲೈವ್ ಮೂಲಕ‌ ನೇರ ಪ್ರಸಾರ ಮಾಡುವ ಚಿಂತನೆ ಇದೆ. 15 ಜಿಲ್ಲೆಗಳ ದೇಗುಲ ಪೂಜಾ ಪದ್ಧತಿಯನ್ನು ನೇರಪ್ರಸಾರ ಮಾಡುವ ಉದ್ದೇಶ ಇದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಲಾಕ್‌ಡೌನ್ ಹಿನ್ನೆಲೆಯಲ್ಲಿ ಆನ್ ಲೈನ್ ಪೂಜೆ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದ್ದೇವೆ ಎಂದು ಸಚಿವರು ತಿಳಿಸಿದರು.
ಆನ್ ಲೈನ್ ಮೂಲಕ ಭಕ್ತರು ಸೇವಾ ವೆಚ್ಚ ಭರಿಸಬಹುದು. ಅವರಿಗೆ ಮನೆಗೇ ಪ್ರಸಾದ ಕಳುಹಿಸಲು ವ್ಯವಸ್ಥೆ ಮಾಡಲಾಗುವುದು. ಮಂಗಳಾರತಿ, ಅರ್ಚನೆ, ಪುಷ್ಪಾಲಂಕಾರ ಪೂಜೆ, ಅಷ್ಟೋತ್ತರ ಸೇರಿ 15 ಸೇವೆಗಳನ್ನು ಭಕ್ತರು ಸಲ್ಲಿಸಬಹುದು ಎಂದರು.
ಬೆಂಗಳೂರಿನ ಬನಶಂಕರಿ, ಸವದತ್ತಿ ಯಲ್ಲಮ್ಮ, ಮೈಸೂರಿನ ಚಾಮುಂಡಿ ಬೆಟ್ಟ, ನಂಜನಗೂಡು ಶ್ರೀಕಂಠೇಶ್ವರ, ಕಟೀಲು ದುರ್ಗಾ ಪರಮೇಶ್ವರಿ, ಕುಕ್ಕೆ ಸುಬ್ರಹ್ಮಣ್ಯ ಸೇರಿ ಹಲವು ಪ್ರಮುಖ ದೇಗುಲಗಳಲ್ಲಿ ಪೂಜೆಯ‌ ನೇರ ಪ್ರಸಾರ ಹಾಗೂ ಆನ್ ಲೈನ್ ವ್ಯವಸ್ಥೆ ಮಾಡಲಾಗುತ್ತದೆ ಎಂದರು.
ಮುಖ್ಯಮಂತ್ರಿ ಸೂಚನೆ ಮೇರೆಗೆ ಆರ್ಥಿಕ ಇಲಾಖೆ 33.66 ಕೋಟಿ ರೂ. ಹಣ ಬಿಡುಗಡೆ ಮಾಡಿದೆ. 29,700 ದೇಗುಲಗಳ ಅರ್ಚಕರಿಗೆ ಮೂರು ತಿಂಗಳ ತಸ್ತೀಕ್ ಬಿಡುಗಡೆ ಮಾಡಲಿದ್ದೇವೆ ಎಂದು ಕೋಟಾ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದರು.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!