Wednesday, July 6, 2022

ಕೊರೋನಾ ಸೋಂಕಿತ ವಿದ್ಯಾರ್ಥಿಗಳಿಗೂ ಸಿಇಟಿ ಬರೆಯಲು ಅವಕಾಶ

Follow Us

♦ ಜುಲೈ 30, 31ರಂದು ರಾಜ್ಯಾದ್ಯಂತ ಸಿಇಟಿ
♦ ಪಿಜಿ-ಸಿಇಟಿ, ಡಿಪ್ಲೊಮಾ-ಸಿಇಟಿ ಮುಂದೂಡಿಕೆ


ಬೆಂಗಳೂರು: ಜುಲೈ 30 ಮತ್ತು 31ರಂದು ರಾಜ್ಯಾದ್ಯಂತ ನಡೆಯಲಿರುವ ಸಿಇಟಿ ಪರೀಕ್ಷೆಗೆ ಹಾಜರಾಗಲು ಕೊರೋನಾ ಸೋಂಕಿತ ವಿದ್ಯಾರ್ಥಿಗಳಿಗೂ ಅವಕಾಶ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎಸ್. ಅಶ್ವತ್ಥ್ ನಾರಾಯಣ್ ಸ್ಪಷ್ಟಪಡಿಸಿದ್ದಾರೆ.
ಕೊರೋನಾ ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗುತ್ತದೆ. ಕೋವಿಡ್ ಲಕ್ಷಣಗಳಲ್ಲದೆ ನೆಗಡಿ, ಕೆಮ್ಮು, ಶೀತ ಇರುವ ವಿದ್ಯಾರ್ಥಿಗಳನ್ನೂ ಪ್ರತ್ಯೇಕ ಕೊಠಡಿಗಳಲ್ಲಿ ಕೂರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಶ್ವತ್ಥನಾರಾಯಣ ಅವರು, ಗಡಿನಾಡು ವಿದ್ಯಾರ್ಥಿಗಳ ಕನ್ನಡ ಪರೀಕ್ಷೆಯನ್ನು ಅಗಸ್ಟ್ 1ರಂದು ನಡೆಸಲಾಗುವುದು. ರಾಜ್ಯದಲ್ಲಿ ಒಟ್ಟು 1,94,356 ವಿದ್ಯಾರ್ಥಿಗಳು 120 ಸ್ಥಳಗಳ 497 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದರು.
188 ಗಡಿನಾಡ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬೆಂಗಳೂರಿಗೇ ಬರಬೇಕಾಗಿಲ್ಲ. ಬಳ್ಳಾರಿ, ಬೆಳಗಾವಿ, ಬೆಂಗಳೂರು, ಮಂಗಳೂರು, ಬೀದರ್,ಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದರು. ಈಗಾಗಲೇ 1,30,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು ಡೌನ್’ಲೋಡ್ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದರು.
ಬೆಂಗಳೂರು ಮಹಾನಗರದಲ್ಲಿ 83 ಕೇಂದ್ರಗಳ ವ್ಯವಸ್ಥೆ ಮಾಡಲಾಗಿದ್ದು, 40,200 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು ವಿದ್ಯಾರ್ಥಿಗಳಲ್ಲಿ 30 ವಿದೇಶಿಯರೂ ಇದ್ದಾರೆ. ಬೆಳಗ್ಗೆ 10.30ರಿಂದ 11.50 ಗಂಟೆ ಹಾಗೂ ಮಧ್ಯಾಹ್ನ 2.30ರಿಂದ 3.30 ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಎಲ್ಲ ಮುನ್ನೆಚ್ಚರಿಕೆಗಳನ್ನು ಕೈಗೊಂಡಿದೆ. ಈಗಾಗಲೇ ಎಸ್‌ಒಪಿ (Standard operating procedure) ರಚಿಸಲಾಗಿದೆ. ಥರ್ಮಲ್ ಸ್ಕ್ರೀನಿಂಗ್, ಮಾಸ್ಕ್, ದೈಹಿಕ ಅಂತರವನ್ನು ಸೇರಿದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು. ಎರಡು ದಿನಗಳ ಮುಂಚೆಯೇ ಕೇಂದ್ರಗಳನ್ನ ಸ್ಯಾನಿಟೈಸ್ ಮಾಡಲಾಗುತ್ತದೆ ಎಂದರು.
ಕ್ವಾರಂಟೈನ್ ವಿನಾಯಿತಿ:
ಸಿಇಟಿ ಪರೀಕ್ಷೆ ಎದುರಿಸುತ್ತಿರುವ ವಿದೇಶಿ ಅಥವಾ ಹೊರಗಿನ ವಿದ್ಯಾರ್ಥಿಗಳಿಗೆ ಹಾಗೂ ಅವರ ಜತೆಯಲ್ಲಿ ಬಂದಿರುವ ಪೋಷಕರಿಗೆ 4 ದಿನಗಳ ಕಾಲ ಕ್ವಾರಂಟೈನ್’ನಿಂದ ವಿನಾಯಿತಿ ನೀಡಲಾಗಿದೆ. ಅವರೂ ಎಲ್ಲ ರೀತಿಯಲ್ಲೂ ಪರೀಕ್ಷೆಗೆ ಒಳಗಾಗಿದ್ದಾರೆ. ಹೀಗಾಗಿ ಆತಂಕಪಡುವ ಅಗತ್ಯವಿಲ್ಲ ಎಂದು ಡಿಸಿಎಂ ತಿಳಿಸಿದರು.
ಆನ್’ಲೈನ್ ಕೌನ್ಸೆಲಿಂಗ್:
ಈ ವರ್ಷ ಸಿಇಟಿ ಕೌನ್ಸೆಲಿಂಗ್, ದಾಖಲೆಗಳ ಪರಿಶೀಲನೆ ಸೇರಿದಂತೆ ಎಲ್ಲವೂ ಆನ್’ಲೈನ್ ನಲ್ಲಿ ನಡೆಯಲಿದೆ. ಇದೆಲ್ಲವನ್ನೂ ವಿದ್ಯಾರ್ಥಿಗಳು ಮನೆಯಿಂದಲೇ ಪೂರೈಸಬಹುದು. ಅಂತಿಮವಾಗಿ ತಾವು ಆಯ್ಕೆ ಮಾಡಿಕೊಳ್ಳುವ ಕಾಲೇಜಿಗೆ ತೆರಳಿ ಪ್ರವೇಶಾತಿ ಪಡೆಯಬಹುದು ಎಂದು ಅವರು ತಿಳಿಸಿದರು.
ಪಿಜಿ-ಸಿಇಟಿ ಪರೀಕ್ಷೆ ಮುಂದಕ್ಕೆ:
ಅಂತಿಮ ವರ್ಷದ ಪರೀಕ್ಷೆಗಳು ನಡೆಯದ ಕಾರಣ ಪಿಜಿ-ಸಿಇಟಿ ಹಾಗೂ ಡಿಪ್ಲೊಮಾ-ಸಿಇಟಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ನಿಗದಿಯಂತೆ ಈ ಪರೀಕ್ಷೆಗಳು ಕ್ರಮವಾಗಿ ಅಗಸ್ಟ್ 8-9 ಮತ್ತು 9 ರಂದು ನಡೆಯಬೇಕಾಗಿತ್ತು. ಅಂತಿಮ ವರ್ಷದ ಪರೀಕ್ಷೆಯ ನಂತರ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ತಿಳಿಸಿದರು.

ಮತ್ತಷ್ಟು ಸುದ್ದಿಗಳು

vertical

Latest News

ನಿಡಸೋಸಿ ಮಠದ ಶಿವಲಿಂಗೇಶ್ವರ ಸ್ವಾಮೀಜಿಗಳ ಕಾರು ಅಪಘಾತ

newsics.com ಧಾರವಾಡ; ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನಿಡಸೋಸಿ ಮಠದ ಶಿವಲಿಂಗೇಶ್ವರ ಸ್ವಾಮೀಜಿಗಳ ಕಾರು ಅಪಘಾತವಾಗಿದೆ. ನಿಡಸೋಶಿಗೆ ಮರಳುವಾಗ ದುರ್ಘಟನೆ ಸಂಭವಿಸಿದೆ. ಸ್ವಾಮೀಜಿಗಳು ಅಪಾಯದಿಂದ ಪಾರಾಗಿದ್ದು, ಆಸ್ಪತ್ರೆಗೆ...

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಶಿಖರ್ ಧವನ್ ನಾಯಕ

newsics.com ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಬ್ ಪಂತ್ ಮತ್ತು ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಶಿಖರ್...

ಸೂಫಿ ಬಾಬಾ ಖ್ಯಾತಿಯ ಆಧ್ಯಾತ್ಮಿಕ ನಾಯಕ ಖ್ವಾಜಾ ಸಯ್ಯದ್ ಚಿಶ್ತಿ ಗುಂಡಿಕ್ಕಿ ಹತ್ಯೆ

newsics.com ನಾಸಿಕ್: ಮಹಾರಾಷ್ಟ್ರದ ನಾಸಿಕ್ನಲ್ಲಿ 'ಸೂಫಿ ಬಾಬಾ' ಎಂದೇ ಖ್ಯಾತರಾಗಿದ್ದ ಆಧ್ಯಾತ್ಮಿಕ ನಾಯಕ ಖ್ವಾಜಾ ಸಯ್ಯದ್ ಚಿಶ್ತಿ (35) ಅವರನ್ನು ಮಂಗಳವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ತಲೆಗೆ ಗುಂಡು ತಗುಲಿದ ತಕ್ಷಣವೇ ಮೃತಪಟ್ಟಿದ್ದಾರೆ. ಕೊಲೆಗಾರರು ಕೂಡಲೇ...
- Advertisement -
error: Content is protected !!