Monday, November 29, 2021

ಪಾದರಾಯನಪುರ ಕೇಸ್; 186 ಪೊಲೀಸರಿಗೆ ಹೋಂ ಕ್ವಾರಂಟೈನ್

Follow Us

ಬೆಂಗಳೂರು: ಪಾದರಾಯನಪುರ ಗಲಾಟೆ ಪ್ರಕರಣ ಆರೋಪಿಗಳನ್ನು ಬಂಧಿಸಿದ್ದ ಪೊಲೀಸರಿಗೆ ಕೊರೋನಾ ಸೋಂಕು ಭೀತಿ ಎದುರಾಗಿದ್ದು, 186 ಪೊಲೀಸ್ ಸಿಬ್ಬಂದಿಯನ್ನು ಹೋಂ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ.
ಬೆಂಗಳೂರಿನ ಪಶ್ಚಿಮ, ಕೇಂದ್ರ, ಉತ್ತರ ವಿಭಾಗ ಹಾಗೂ ಸಿಸಿಬಿ ಸಿಬ್ಬಂದಿ ಸೇರಿ ಒಟ್ಟು 186 ಪೊಲೀಸರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿತ್ತು. 150ಕ್ಕೂ ಹೆಚ್ಚು ಸಿಬ್ಬಂದಿಯ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗಿದೆ. ಅವಶ್ಯಕತೆ ಇದ್ದಲ್ಲಿ ಕೆಲ ಪೊಲೀಸ್ ಸಿಬ್ಬಂದಿಯ ಕುಟುಂಬಸ್ಥರಿಗೂ ಕೋವಿಡ್-19 ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.
ಪಾದರಾಯನಪುರ ಪ್ರಕರಣದ 83 ಆರೋಪಿಗಳನ್ನು ಚಾಮರಾಜಪೇಟೆಯ ಸಿಸಿಬಿ ಕಚೇರಿಯಲ್ಲಿ 2 ಗಂಟೆಗಳ ಕಾಲ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದರು.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!