ಬಳ್ಳಾರಿ: ಪಕ್ಕೆಲುಬು ಪದ ಹೇಳಲು ಬಾರದ ಮಗುವನ್ನು ಅಣಕಿಸುವ ರೀತಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಶಿಕ್ಷಕ ಕೊನೆಗೂ ಪತ್ತೆಯಾಗಿದ್ದು, ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ.
ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಕುರುವತ್ತಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಟಿ.ಚಂದ್ರಶೇಖರಪ್ಪ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ನಾಗರಾಜ್ ತಿಳಿಸಿದ್ದಾರೆ.
ಜ.3ರಂದು ಈ ವಿಡಿಯೋ ಮಾಡಲಾಗಿತ್ತು. ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು. ಶಿಕ್ಷಣ ಸಚಿವ ಸುರೇಶಕುಮಾರ್ ವೀಡಿಯೋ ಮಾಡಿದ ಶಿಕ್ಷಕರನ್ನು ಅಮಾನತುಗೊಳಿಸಲು ಕಳೆದ ಗುರುವಾರ ಸೂಚಿಸಿದ್ದರು.