newsics.com
ದೇವನಹಳ್ಳಿ: ಟೇಕ್ಆಫ್ ಆಗುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸ್ವಪ್ನೋಲ್ ಹೋಲೆ ಬಂಧಿತ ಪ್ರಯಾಣಿಕ. ಸ್ವಪ್ನೋಲ್ ಇಂಡಿಗೋ ವಿಮಾನದಲ್ಲಿ ಮಹಾರಾಷ್ಟ್ರದ ನಾಗ್ಪುರದಿಂದ ಬೆಂಗಳೂರು ಮಾರ್ಗವಾಗಿ ಬ್ಯಾಂಕಾಕ್ಗೆ ತೆರಳುತ್ತಿದ್ದನು.
ಬೆಂಗಳೂರಿನ ದೇವನಹಳ್ಳಿ ಬಳಿ ವಿಮಾನ ಟೇಕ್ಆಫ್ ಆಗುತ್ತಿದ್ದಂತೆ ಸ್ವಪ್ನೋಲ್ ತನ್ನ ಸೀಟ್ ಬಳಿ ಇದ್ದ ಎಮರ್ಜೆನ್ಸಿ ಎಕ್ಸಿಟ್ ಡೋರ್ ತೆರೆಯಲು ಯತ್ನಿಸಿದ್ದಾನೆ. ಇದನ್ನು ಕಂಡ ಸಿಬ್ಬಂದಿ ಆತನನ್ನು ತಡೆದಿದ್ದಾರೆ. ಬಳಿಕ ವಿಮಾನ ಮತ್ತೆ ಲ್ಯಾಂಡ್ ಆಗಿದ್ದು, ಸಿಬ್ಬಂದಿ ಸ್ವಪ್ನೋಲ್ ಹೋಲೆಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.