ಬೆಂಗಳೂರು: ಇಂದು ನಾಡೋಜ, ಹಿರಿಯ ಸಾಹಿತಿ ಪಾಟೀಲ ಪುಟ್ಟಪ್ಪ ಅವರ ಜನ್ಮದಿನ. ಪಾಪು ಅವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿ ಅನೇಕ ಗಣ್ಯರು, ಸಾಹಿತಿಗಳು ಶುಭಾಶಯ ಕೋರಿದ್ದಾರೆ.
ನಿರ್ಭಿಡೆಯ ಪತ್ರಕರ್ತರು, ಸೃಜನಶೀಲ ಸಾಹಿತಿಗಳು, ನಾಡಿನ ಸಾಕ್ಷಿಪ್ರಜ್ಞೆಯಂತಿರುವ ಅಪ್ರತಿಮ ಹೋರಾಟಗಾರರಾದ ನಾಡೋಜ ಪಾಟೀಲ ಪುಟ್ಟಪ್ಪ ಅವರಿಗೆ ಜನ್ಮದಿನದ ಶುಭಾಶಯಗಳು. ಕರ್ನಾಟಕ ಏಕೀಕರಣಕ್ಕಾಗಿ ಅವರು ನಡೆಸಿದ ಹೋರಾಟ ಅನನ್ಯ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇಂದು ಸಾಹಿತಿ ಪಾಟೀಲ ಪುಟ್ಟಪ್ಪ ಜನ್ಮದಿನ
Follow Us