Monday, October 3, 2022

ಪೇಸಿಎಂ ಅಭಿಯಾನ: ಸಿದ್ದರಾಮಯ್ಯ, ಡಿಕೆಶಿ, ಸುರ್ಜೇವಾಲ ಪೊಲೀಸ್ ವಶಕ್ಕೆ

Follow Us

newsics.com

ಬೆಂಗಳೂರು: ಪೇಸಿಎಂ ವಿವಾದ ತಾರಕಕ್ಕೇರಿದ್ದು, ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಸುರ್ಜೇವಾಲ ಮೊದಲಾದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ‌.
ಕಾಂಗ್ರೆಸ್‌ನಿಂದ ನಡೆಯುತ್ತಿರುವ PayCM ಅಭಿಯಾನ ರಾಜ್ಯದ ಹಲವೆಡೆ ತೀವ್ರಗೊಂಡಿದ್ದು, ಗುರುವಾರ ಸಂಜೆ ರೇಸ್ ಕೋರ್ಸ್ ರಸ್ತೆಯ ಗೋಡೆಗೆ ಪೇಸಿಎಂ ಸ್ಟಿಕರ್ ಅಂಟಿಸಲು ಮುಂದಾದ ಕಾಂಗ್ರೆಸ್ ನಾಯಕರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದರು.

ಎರಡು ದಿನಗಳ ಹಿಂದೆ ಬೆಂಗಳೂರಿನ‌ ಗೋಡೆಗಳ‌ ಮೇಲೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ಅಣಕಿಸುವ ರೀತಿಯಲ್ಲಿ ಕ್ಯೂಆರ್ ಕೋಡ್ ಚಿತ್ರದ ಪೇಸಿಎಂ ಸ್ಟಿಕರ್‌ಗಳನ್ನು ಅಂಟಿಸಿದ್ದರು. ಈ ಬಗ್ಗೆ ಸಿಎಂ ಬೊಮ್ಮಾಯಿ‌ ಕಾಂಗ್ರೆಸ್ ವಿರುದ್ಧ‌ ಕಿಡಿಕಾರಿದ್ದರು. ಬಳಿಕ ಪೊಲೀಸರು ಸ್ಟಿಕರ್ ಅಂಟಿಸಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ್ದರು. ಕಾರ್ಯಕರ್ತರ ಬಂಧನ‌ ಖಂಡಿಸಿ ಹಾಗೂ ಪೇಸಿಎಂ ಅಭಿಯಾನ ಮುಂದುವರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರು ಸಿಎಂ ಮನೆಗೆ ತೆರಳುವ ಹೋರಾಟ ಹಮ್ಮಿಕೊಂಡಿದ್ದರು. ಅದಕ್ಕೂ ಮುನ್ನವೇ ರೇಸ್ ಕೋರ್ಸ್ ರಸ್ತೆಯ ಬಳಿಯೇ ಕೈ ನಾಯಕರನ್ಜು ಪೊಲೀಸರು ವಶಕ್ಕೆ ಪಡೆದರು.

ಅಲ್ಲದೆ, ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಸರ್ಕಾರದ ಶೇ.40 ಕಮಿಷನ್ ಭ್ರಷ್ಟಾಚಾರದ ಬಗ್ಗೆ ಚರ್ಚೆಗೆ ಅವಕಾಶ ಸಿಗದೇ ನಿರಾಶರಾಗಿರುವ ಕಾಂಗ್ರೆಸ್ ಮುಖಂಡರು ಬೆಂಗಳೂರಿನ ಬೀದಿ ಬದಿಯ ಗೋಡೆಗಳು, ಕಾಂಪೌಂಡ್‌ಗಳು ಮತ್ತು ಕಟ್ಟಡಗಳಿಗೆ ಪೇಸಿಎಂ
ಪೋಸ್ಟರ್ ಅಂಟಿಸುವ ಅಭಿಯಾನ ನಡೆಸಿದರು.

ನಗರದ ರೇಸ್‌ಕೋರ್ಸ್ ರಸ್ತೆಯಲ್ಲಿನ ಕಾಂಪೌಂಡ್ ಗೋಡೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತಿತರ ಮುಖಂಡರು, ಶಾಸಕರು, ಕಾರ್ಯಕರ್ತರು ಪೇಸಿಎಂ ಪೋಸ್ಟರ್ ಅಂಟಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!