ಉಡುಪಿ: ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಎದೆಯಲ್ಲಿ ಕಫ ಕಟ್ಟಿಕೊಂಡ ಹಿನ್ನೆಲೆಯಲ್ಲಿ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲಿದ್ದ ಪೇಜಾವರ ಶ್ರೀಗಳಿಗೆ ಕೃತಕ ಉಸಿರಾಟದ ವ್ಯವಸ್ಥೆ ಅಳವಡಿಸಲಾಗಿತ್ತು.
ಈಗ ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಈ ಮಧ್ಯೆ, ಬಿಜೆಪಿ ಹಿರಿಯ ನಾಯಕ ಎಲ್. ಕೆ. ಅಡ್ವಾಣಿ ಪುತ್ರಿ ಪ್ರತಿಭಾ ದೂರವಾಣಿಯಲ್ಲಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ.
ಪೇಜಾವರ ಶ್ರೀಗಳ ಆರೋಗ್ಯದಲ್ಲಿ ತುಸು ಚೇತರಿಕೆ
Follow Us