ಬೆಂಗಳೂರು: ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕಾಗಿ ಭಾನುವಾರ ಮಧ್ಯಾಹ್ನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ.
ಅಂತಿಮ ದರ್ಶನದ ಬಳಿಕ ವಿಧಿವಿಧಾನಗಳನ್ನು ನೇರವೇರಿಸಿದ ನಂತರ ಸರ್ಕಾರಿ ಗೌರವದೊಂದಿಗೆ ವಿದ್ಯಾಪೀಠದ ಕೃಷ್ಣ ಮಂದಿರ ಎಡಭಾಗದಲ್ಲಿ ವೃಂದಾವನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಮಧ್ಯಾಹ್ನ 1 ಗಂಟೆಯವರೆಗೆ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅಲ್ಲಿಂದ ವಿಶೇಷ ಸೇನಾ ಹೆಲೆಕಾಪ್ಟರ್ ಮೂಲಕ ಶ್ರೀಗಳ ಪಾರ್ಥೀವ ಶರೀರವನ್ನು ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ತರಲಾಗುವುದು ಎಂದು ವಿದ್ಯಾಪೀಠ ಮಾಹಿತಿ ನೀಡಿದೆ.
ಬೆಂಗಳೂರಿನ ವಿದ್ಯಾಪೀಠದಲ್ಲಿ ಪೇಜಾವರ ಶ್ರೀ ಅಂತ್ಯಕ್ರಿಯೆ
Follow Us