ಉಡುಪಿ: ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಆರೋಗ್ಯಸ್ಥಿತಿ ಗಂಭೀರವಾಗಿಯೇ ಇದ್ದು, ಚಿಕಿತ್ಸೆ ನೀಡಲು ದೆಹಲಿ ಏಮ್ಸ್ ವೈದ್ಯರ ನೆರವು ಪಡೆಯಲಾಗಿದೆ.
ಈ ಕುರಿತು ಮಣಿಪಾಲ ಕೆಎಂಸಿ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದು, ಶ್ರೀಗಳಿಗೆ ಐಸಿಯುನಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದೆ. ಭಾನುವಾರ ಬೆಂಗಳೂರಿನಿಂದ ತಜ್ಞ ವೈದ್ಯರ ತಂಡ ಇಲ್ಲಿಗೆ ಆಗಮಿಸಿದೆ ಎಂದು ಹೇಳಿದ್ದಾರೆ.
ಈ ಮಧ್ಯೆ, ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಲು ಅವರ ಶಿಷ್ಯೆ, ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಇಂದು ಆಸ್ಪತ್ರೆಗೆ ಭೇಟಿ ನೀಡಿದರು. ಝಡ್ಪ್ಲಸ್ ಭದ್ರತೆಯಲ್ಲಿ ಆಗಮಿಸಿದ ಅವರು ಕಾರಿನಿಂದ ಇಳಿದು ವ್ಹೀಲ್ ಚೇರ್ ಮೂಲಕ ಆಸ್ಪತ್ರೆ ಒಳಗೆ ಸಾಗಿದರು.