ನಕಲಿ ಅಂಕಪಟ್ಟಿ ದಂಧೆ ನಡೆಸುತ್ತಿದ್ದ ನಾಲ್ವರ ಬಂಧನ

newsics.com ಬೆಂಗಳೂರು: ನಕಲಿ ಅಂಕಪಟ್ಟಿ ದಂಧೆ ನಡೆಸುತ್ತಿದ್ದ ನಾಲ್ವರನ್ನು‌ ಪೊಲೀಸರು ಬಂಧಿಸಿದ್ದಾರೆ. ದಂಧೆ ನಡೆಸುತ್ತಿದ್ದ ಸಿಕ್ಕಿಂ ಮೂಲದವರೂ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಆರೋಪಿಗಳು ಹಣ ನೀಡಿದರೆ ದೇಶಾದ್ಯಂತ ವಿವಿಧ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳ ಅಂಕಪಟ್ಟಿಗಳನ್ನು ನೀಡುತ್ತಿದ್ದರು ಎಂದು ತಿಳಿದುಬಂದಿದೆ. ಆರೋಪಿಗಳು 10ನೇ ತರಗತಿ, 12ನೇ ತರಗತಿ ಹಾಗೂ ಕಾಲೇಜು ಪದವಿ ಪ್ರಮಾಣ ಪತ್ರಗಳಿಗೆ ₹20,000 ರಿಂದ ₹40,000 ರೂಪಾಯಿ ಪಡೆಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ನೆದರ್ಲೆಂಡ್‌ ನಲ್ಲಿ 13 ಒಮಿಕ್ರಾನ್ ಪ್ರಕರಣಗಳು ಪತ್ತೆ