Thursday, December 9, 2021

ಅಂತರ್ ಜಿಲ್ಲಾ ಪ್ರವಾಸಕ್ಕೆ ಅನುಮತಿ; ಬೆಂಗಳೂರಲ್ಲಿ ಸಂಚಾರ ನಿರ್ಬಂಧವಿಲ್ಲ

Follow Us

ಬೆಂಗಳೂರು: ತಮ್ಮ ಊರಿಗೆ ಅಥವಾ ಕೆಲಸದ ಸ್ಥಳಗಳಿಗೆ ಹಿಂದಿರುಗಲು ಒಂದು ದಿನಕ್ಕೆ ಒಂದು ಬಾರಿ ಮಾತ್ರ ಪ್ರಯಾಣಿಸಲು ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್ ನೀಡಲು ಸರ್ಕಾರ ತೀರ್ಮಾನಿಸಿದೆ.
ಲಾಕ್‌ಡೌನ್‌ ನಿಂದ ಬೇರೆ ಊರಿನಲ್ಲಿ ಸಿಲುಕಿಕೊಂಡಿರುವವರು ಇಂತಹ ಪಾಸ್ ಪಡೆದು ನಿರ್ದಿಷ್ಟ ಪ್ರದೇಶಕ್ಕೆ ತೆರಳಬಹುದಾಗಿದೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬೈಕ್ ಹಾಗೂ ಕಾರಿನಲ್ಲಿ ಸಂಚರಿಸಲು ಸರ್ಕಾರ ಹಸಿರು ನಿಶಾನೆ ತೋರಿದೆ. ಬೈಕ್ ನಲ್ಲಿ ಓರ್ವ, ಕಾರಿನಲ್ಲಿ ಇಬ್ಬರು ಪ್ರಯಾಣಿಸಬಹುದಾಗಿದೆ. ಇದಕ್ಕೆ ಯಾವುದೇ ಪಾಸ್ ಅಗತ್ಯವಿಲ್ಲ ಎಂದು ಸರ್ಕಾರ ತಿಳಿಸಿದೆ.
ಆರ್ಥಿಕ ಚಟುವಟಿಕೆಯ ಕೇಂದ್ರವಾದ ಬೆಂಗಳೂರಿಗೆ ಪ್ರತ್ಯೇಕವಾದ ಮಾರ್ಗಸೂಚಿ ಸಿದ್ಧಪಡಿಸಲು ಸರ್ಕಾರ ಮುಂದಾಗಿದೆ. ಜಿಲ್ಲೆಗಳಲ್ಲಿ ಆರ್ಥಿಕ ಚಟುವಟಿಕೆ ಆರಂಭ ವಿಚಾರ ಆಯಾ ಜಿಲ್ಲಾಧಿಕಾರಿ ತೀರ್ಮಾನವನ್ನು ಅವಲಂಬಿಸಿರುತ್ತದೆ ಎಂದು ಸರ್ಕಾರ ತಿಳಿಸಿದೆ.
ನೇಕಾರರ ಸಮಸ್ಯೆಗಳನ್ನು ಪರಿಹರಿಸುವ ಕುರಿತು ಪ್ರತ್ಯೇಕ ಸಭೆ ಕರೆದು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.
ಸ್ವಂತ ಜಿಲ್ಲೆಗಳಿಗೆ ತೆರಳ ಬಯಸಿರುವ ವಲಸೆ ಕಾರ್ಮಿಕರಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಒನ್ ವೇ ದರ ಪಾವತಿಸಿ ಪ್ರಯಾಣಿಸಲು ಅವಕಾಶ ಕಲ್ಪಿಸಲು ತೀರ್ಮಾನಿಸಲಾಯಿತು. ಹೊರ ಜಿಲ್ಲೆಗಳಿಂದ ಬರುವವರನ್ನು ಸಾಂಸ್ಥಿಕ ಕ್ವಾರಂಟೈನ್‌ ಮಾಡಲು ನಿರ್ಧರಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಆಹಾರ ಧಾನ್ಯಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡುವ ಕುರಿತು ಕ್ರಮವಹಿಸಲು ಸೂಚಿಸಲಾಯಿತು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!