newsics.com
ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸುವ ಸೂಚನೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೀಡಿದ್ದಾರೆ.
ತೈಲ ದರ ಗಗನಕ್ಕೇರಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದು ಬಿಜೆಪಿ ಮೇಲೆ ರಾಜಕೀಯ ಪರಿಣಾಮ ಕೂಡ ಬೀರಿದೆ.
ರಾಜ್ಯದಲ್ಲಿ ಉಪ ಚುನಾವಣೆ ಪ್ರಚಾರ ಬಿರುಸಿನಿಂದ ಸಾಗಿದ್ದು, ಪ್ರತಿಪಕ್ಷ ಕಾಂಗ್ರೆಸ್ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳವನ್ನು ಪ್ರಮುಖ ಅಸ್ತ್ರವಾಗಿ ಬಳಸುತ್ತಿದೆ.
ಈ ಹಿನ್ನೆಲೆಯಲ್ಲಿ ತೈಲ ಉತ್ಪನ್ನಗಳ ಮೇಲಿನ ರಾಜ್ಯದ ತೆರಿಗೆ ಪಾಲಿನಲ್ಲಿ ಕಡಿತಗೊಳಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ವರದಿಯಾಗಿದೆ.
ಈ ಸಂಬಂಧ ಆರ್ಥಿಕ ಪರಿಣಿತರ ಸಲಹೆ ಕೋರಲಾಗಿದೆ. ಆರ್ಥಿಕ ಪರಿಣಿತರ ಸಲಹೆ ಆಧರಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.