Saturday, November 26, 2022

ಫೋನ್ ಕದ್ದಾಲಿಕೆ ಪ್ರಕರಣ: ಶಾಸಕರ ಆಪ್ತ ಜ್ಯೋತಿಷಿಯಿಂದಲೇ ಬೆಲ್ಲದ್’ಗೆ ಕರೆ‌!

Follow Us

newsics.com

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಶಾಸಕ ಅರವಿಂದ ಬೆಲ್ಲದ್ ಅವರ ಫೋನ್‌ ಕದ್ದಾಲಿಕೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ.

ವಂಚನೆ ಆರೋಪದಡಿ ಜೈಲಿನಲ್ಲಿರುವ ಯುವರಾಜ್ ಸ್ವಾಮಿ ಬೆಲ್ಲದ್ ಅವರಿಗೆ ಫೋನ್ ಕರೆ ಮಾಡಿಲ್ಲ ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬೆಲದ್ ಅವರು ಶಂಕೆ ವ್ಯಕ್ತಪಡಿಸಿ ದೂರಿನಲ್ಲಿ ನೀಡಿದ್ದ ಮೊಬೈಲ್ ನಂಬರ್ ಶಾಸಕರ ಆಪ್ತನದು. ಅದೇ ನಂಬರ್ ನಿಂದ ಬೆಲ್ಲದ್ ಅವರ ಆಪ್ತ ಕರೆ ಮಾಡಿದ್ದ ಎಂಬುದು ಕಬ್ಬನ್‌ ಪಾರ್ಕ್ ಉಪವಿಭಾಗ ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

ಹೀಗಾಗಿ ಈ ಪ್ರಕರಣದ ತನಿಖೆಯನ್ನು ಕೈಬಿಡುವಂತೆ ಪೊಲೀಸರು ಹಿರಿಯ ಅಧಿಕಾರಿಗಳಿಗೆ ಮನವಿ‌‌ ಮಾಡುವ ಸಾಧ್ಯತೆಯಿದೆಯೆಂದು ಮೂಲಗಳು ತಿಳಿಸಿವೆ.

ಜೂನ್ 2ರಂದು ಕರೆ ಬಂದಿತ್ತು ಎಂದು ಶಾಸಕ ಬೆಲ್ಲದ್ ನೀಡಿದ್ದ ನಂಬರ್ ಜಾಡು ಹಿಡಿದು ಪೊಲೀಸರು ತನಿಖೆ ಕೈಗೊಂಡಾಗ ಅದು‌ ಹೈದರಾಬಾದ್ ನಲ್ಲಿರುವ ಶಾಸಕರ ಆಪ್ತ ಜ್ಯೋತಿಷಿ ಅವರದು ಎಂದು ಗೊತ್ತಾಗಿದೆ. ಈ‌ ವಿಷಯ ತಿಳಿಯುತ್ತಿದ್ದಂತೆ ತನಿಖೆಯ ನೆಪದಲ್ಲಿ ಆಪ್ತ ಜ್ಯೋತಿಷಿಗೆ ಯಾವುದೇ ತೊಂದರೆ ನೀಡದಂತೆ ಬೆಲ್ಲದ್ ಅವರೇ ಪೊಲೀಸರಿಗೆ ಮನವಿ‌ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈ‌ ಮಧ್ಯೆ, ಜೈಲಿನಲ್ಲಿರುವ ಯುವಾರಜ್ ಸ್ವಾಮಿಯನ್ನೂ ಪೊಲೀಸರು ವಿಚಾರಣೆಗೊಳಪಡಿಸಿದ್ದು, ತನಗೂ ಈ ಕರೆಗೂ ಸಂಬಂಧವಿಲ್ಲ. ಶಾಸಕ‌ ಬೆಲ್ಲದ್ ತನಗೆ ಪರಿಚಯವಿಲ್ಲ ಎಂದು ಯುವರಾಜ್ ಸ್ವಾಮಿ‌ ಹೇಳಿದ್ದಾನೆಂದು ಪೊಲೀಸ್ ಮೂಲಗಳು ತಿಳಿಸಿವೆ.

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!