ಬೆಂಗಳೂರು: ಡಿಸೆಂಬರ್ 22 ರಂದು ಬೆಂಗಳೂರಿನ ಟೌನ್ ಹಾಲ್ ಬಳಿ ವರುಣ್ ಎಂಬ ವ್ಯಕ್ತಿಯ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಟೌನ್ ಹಾಲ್ ಬಳಿ ಪೌರತ್ವ ಕಾನೂನು ಪರವಾಗಿ ಸಭೆ ನಡೆದ ಬಳಿಕ ಮನೆಗೆ ತೆರಳುತ್ತಿದ್ದ ವರುಣ್ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬೆಂಗಳೂರು ಪೊಲೀಸರು, ಅಂತಿಮವಾಗಿ ಆರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳು ರಾಜಕೀಯ ಪಕ್ಷವೊಂದರ ಜೊತೆ ಗುರುತಿಸಿಕೊಂಡಿದ್ದರು ಎಂದು ವರದಿಯಾಗಿದೆ. ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಪತ್ರಿಕಾಗೋಷ್ಟಿಯಲ್ಲಿ ಆರೋಪಿಗಳ ಬಂಧನವನ್ನು ಪ್ರಕಟಿಸಿದರು.