Wednesday, July 6, 2022

ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವರದಿ ನೆಗೆಟಿವ್: ಕರ್ತವ್ಯಕ್ಕೆ ಹಾಜರು

Follow Us

ಬೆಂಗಳೂರು: ತಮ್ಮ ಕಾರು ಚಾಲಕನಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರು ಈ ಮಾಹಿತಿ ಹಂಚಿಕೊಂಡಿದ್ದಾರೆ. ಕೊರೋನಾ ಪರೀಕ್ಷಾ ವರದಿ ಕೈ ಸೇರಿದ್ದು ನೆಗೆಟಿವ್ ಎಂಬುದು ದೃಢಪಟ್ಟಿದೆ ಎಂದು ಅವರು ಹೇಳಿದ್ದಾರೆ.

ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವ್ಯಕ್ತಪಡಿಸಿದ ಎಲ್ಲರಿಗೂ ಭಾಸ್ಕರ್ ರಾವ್ ಅವರು ಧನ್ಯವಾದ ಅರ್ಪಿಸಿದ್ದಾರೆ. ಇನ್ನೊಂದೆಡೆ ಅರಣ್ಯ ಸಚಿವ ಆನಂದ್ ಸಿಂಗ್ ಅವರ ಕಾರು ಚಾಲಕನಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಸಚಿವ ಆನಂದ್ ಸಿಂಗ್ ಅವರು ಕೂಡ ಮುನ್ನೆಚ್ಚರಿಕೆ ವಹಿಸಲು ನಿರ್ಧರಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...

ಆದಾಯ ತೆರಿಗೆ ವಂಚನೆ : ಡೋಲೋ ಮಾತ್ರೆ ಕಚೇರಿ ಮೇಲೆ ದೇಶವ್ಯಾಪಿ ದಾಳಿ

newsics.com ಬೆಂಗಳೂರು: ಆದಾಯ ತೆರಿಗೆ ವಂಚಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಖ್ಯಾತ ಮಾತ್ರೆ ತಯಾರಕ ಸಂಸ್ಥೆ ಡೋಲೋ ಮುಖ್ಯ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೇಶದ ಹಲವು ರಾಜ್ಯಗಳಲ್ಲಿ ಕಾರ್ಯಾಚರಿಸುತ್ತಿರುವ...
- Advertisement -
error: Content is protected !!