Saturday, April 17, 2021

ತುಳುವಿನಲ್ಲಿ ಟ್ವೀಟ್ ಮಾಡಿ ಧನ್ಯವಾದ ಹೇಳಿದ ಹರ್ಷ

ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ಕಳೆದ 11 ತಿಂಗಳಿನಿಂದ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ ಡಾ. ಹರ್ಷ ಅವರು ಇದೀಗ ವರ್ಗಾವಣೆಗೊಂಡಿದ್ದಾರೆ. ತಮ್ಮ ವರ್ಗಾವಣೆ ಕುರಿತು ಹಾಗೂ ಆಯುಕ್ತರಾಗಿದ್ದಾಗ ಜನತೆ ನೀಡಿದ ಸಹಕಾರಕ್ಕೆ ಅವರು ತುಳುವಿನಲ್ಲಿ  ಟ್ವೀಟ್ ಮಾಡಿ ಧನ್ಯವಾದ ಹೇಳಿದ್ದಾರೆ. ಕಳೆದ 11 ತಿಂಗಳಿನಿಂದ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದೇನೆ.. ಇಲಾಖೆಯ ಸಹಕಾರದ ಜತೆ ಜತೆಗೆ ಜನಪರ ನೀತಿಯೊಂದಿಗೆ ಕರ್ತವ್ಯ ನಿರ್ವಹಿಸಿದ್ದೇನೆ. ನನಗೆ ಸಹಕಾರ ನೀಡಿದ ಎಲ್ಲರಿಗೂ ಪ್ರೀತಿಯ ವಂದನೆಗಳು ಎಂದು ಹರ್ಷ ಅವರು ಟ್ವಿಟರ್ ನಲ್ಲಿ  ಬರೆದುಕೊಂಡಿದ್ದಾರೆ. ಮಂಗಳೂರು ಪೊಲೀಸ್ ಆಯುಕ್ತರಾಗಿ ಹರ್ಷ ಅವರು ಗಂಭೀರ ಸವಾಲುಗಳನ್ನು ಎದುರಿಸಿದ್ದರು. ಈ ಎಲ್ಲ ಸವಾಲುಗಳನ್ನು ಅಷ್ಟೇ ಪರಿಣಾಮಕಾರಿಯಾಗಿ ಕೂಡ ನಿಭಾಯಿಸಿದ್ದರು. ಪೌರತ್ವ ಕಾನೂನು ತಿದ್ದುಪಡಿ ವಿರೋಧಿ ಪ್ರತಿಭಟನೆ ಮಂಗಳೂರಿನಲ್ಲಿ ಹಿಂಸಾಚಾರಕ್ಕೆ ತಿರುಗಿತ್ತು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ನಡೆಸಿದ ಗೋಲಿಬಾರ್ ನಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಇದು ಕೆಲವು ರಾಜಕೀಯ ಪಕ್ಷಗಳ ಕೆಂಗಣ್ಣಿಗೆ ಕೂಡ ಗುರಿಯಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!