ಬೆಂಗಳೂರು: ನಗರ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಹೋಂ ಕ್ವಾರಂಟೈನ್’ಗೆ ಒಳಗಾಗಿದ್ದಾರೆ.
ಹೆಚ್ಚುವರಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿನ ಸಿಬ್ಬಂದಿಯೊಬ್ಬರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಹೇಮಂತ್ ನಿಂಬಾಳ್ಕರ್ ಮುಂಜಾಗ್ರತಾ ಕ್ರಮವಾಗಿ ಹೋಂ ಕ್ವಾರಂಟೈನ್’ನಲ್ಲಿದ್ದಾರೆ.
ಹದಿಮೂರು ವರುಷ ಐಸೋಲೇಷನ್’ನಲ್ಲೇ ಬದುಕು!
ಈ ಕುರಿತಂತೆ ಟ್ವಿಟ್ ಮಾಡಿರುವ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್, ನಮ್ಮ ಸಹೋದ್ಯೋಗಿಯೊಬ್ಬರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಕೊರೋನಾ ಸೋಂಕಿತ ಉದ್ಯೋಗಿಯೊಂದಿಗೆ ಪ್ರಾಥಮಿಕ ಸಂಪರ್ಕಿತನಾದ ಕಾರಣದಿಂದಾಗಿ, ಮುಂಜಾಗ್ರತಾ ಕ್ರಮವಾಗಿ ಹೋಂ ಕ್ವಾರಂಟೈನ್ ನಲ್ಲಿ ಇದ್ದೇನೆ ಎಂಬುದಾಗಿ ತಿಳಿಸಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿರುವ ಬೆನ್ನಲ್ಲಿಯೇ, ಕೊರೋನಾ ವಾರಿಯರ್ಸ್ ಗಳಾಗಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರಿಗೂ ಸೋಂಕು ತಗಲುತ್ತಿರುವುದು ಮುಂದುವರೆದಿದೆ.