Wednesday, November 30, 2022

ರಾಜ್ಯದ ಹಲವು ಜಿಲ್ಲೆಗಳಲ್ಲಿ ಪಿಎಫ್ಐ ಕಚೇರಿಗಳಿಗೆ ಪೊಲೀಸರಿಂದ ಬೀಗ

Follow Us

newsics.com

ಬೆಂಗಳೂರು:  ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೂಡ ಅದರ ವಿರುದ್ಧ ಕಾರ್ಯಾಚರಣೆ ಆರಂಭವಾಗಿದೆ. ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು , ಕೋಲಾರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪೊಲೀಸರು  ಪಿಎಫ್ ಐ ಕಚೇರಿಗೆ ದಾಳಿ ನಡೆಸಿ ಬೀಗ ಜಡಿದಿದ್ದಾರೆ.

ಮಂಗಳೂರು ನಗರ ಮತ್ತು ಹೊರ ವಲಯದಲ್ಲಿ ಪೊಲೀಸ್ ಆಯುಕ್ತ ಶಶಿ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಕೋಣಾಜೆ, ಪಣಂಬೂರು ಸೇರಿದಂತೆ 12 ಪ್ರದೇಶಗಳಲ್ಲಿ ಇರುವ ಪಿಎಫ್ಐ ಕಚೇರಿಗೆ  ಪೊಲೀಸರು ಬೀಗ ಹಾಕಿದ್ದಾರೆ.

ಇದೇ ವೇಳೆ ನಿಷೇಧದ  ಹಿನ್ನೆಲೆಯಲ್ಲಿ ಕಾನೂನು ಮತ್ತು ಶಿಸ್ತು ಪರಿಸ್ಥಿತಿಗೆ ಯಾವುದೇ ಸವಾಲು ಎದುರಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಡಿ ಜಿ ಪಿ ಪ್ರವೀಣ್ ಸೂದ್  ಸೂಚನೆ ನೀಡಿದ್ದಾರೆ.

ಮಮತಾ ಬ್ಯಾನರ್ಜಿ ಬಗ್ಗೆ ಅವಹೇಳನಕಾರಿ ಮೀಮ್ಸ್: ಯು ಟ್ಯೂಬರ್ ಬಂಧನ

 

ಮತ್ತಷ್ಟು ಸುದ್ದಿಗಳು

vertical

Latest News

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...

ಹೃದಯಾಘಾತವಾಗಿ ದೇವಾಲಯದ ಆನೆ ಸಾವು

newsics.com ಪುದುಚೇರಿ: ಇತಿಹಾಸ ಪ್ರಸಿದ್ಧ ದೇಗುಲದ ಆನೆಯೊಂದು ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ. ಪುದುಚೇರಿಯ ಪ್ರಸಿದ್ಧ ದೇವಾಲಯ ಮನಕುಲ ವಿನಾಯಕರ ದೇಗುಲಕ್ಕೆ ಸೇರಿದ್ದ ಆನೆ ಲಕ್ಷ್ಮಿ ವಿಹರಿಸುತ್ತಿದ್ದಾಗ ಹಠಾತ್ ಕುಸಿದಿದೆ. ಈ ವೇಳೆ ಆನೆಗೆ...
- Advertisement -
error: Content is protected !!