ಬೆಂಗಳೂರು: ನಾಳೆ (ಜ.19) ರಾಜ್ಯದಲ್ಲಿ 0-5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕುವ ದಿನವಾಗಿದೆ.
ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ದಿನವಾದ ನಾಳೆ 64,65,561 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಮಾಹಿತಿ ನೀಡಿದ್ದಾರೆ.
ಲಸಿಕೆ ನೀಡಿಕೆ ಕಾರ್ಯಕ್ರಮಕ್ಕೆ 33,021 ಬೂತ್ಗಳು, 46,620 ತಂಡಗಳು, 1,9,554 ಕಾರ್ಯಕರ್ತರು, 7,105 ಮೇಲ್ವಿಚಾರಕರು, 977 ಸಂಚಾರಿ ತಂಡಗಳು ಹಾಗೂ 2,111 ಟ್ರಾನ್ಸಿಟ್ ತಂಡಗಳು ಕಾರ್ಯನಿರ್ವಹಿಸಲು ಸಜ್ಜಾಗಿವೆ ಎಂದು ಶ್ರೀರಾಮುಲು ತಿಳಿಸಿದ್ದಾರೆ.
ನಾಳೆ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಿ
Follow Us