ಕಾರವಾರ: ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿ ವಿರೋಧಿಸಿ ಮಂಗಳವಾರವೂ ಹೋರಾಟ ಮುಂದುವರಿದಿದ್ದು, ಎರಡನೇ ದಿನಕ್ಕೆ ಕಾಲಿಟ್ಟಿದೆ.
ನಗರ ಹಾಗೂ ತಾಲೂಕಿನ ಮೀನು ಮಾರುಕಟ್ಟೆಗಳು ಬಂದ್ ಆಗಿದ್ದು, ನಗರ ಭಾಗದ ಮುಖ್ಯ ಮೀನು ಮಾರುಕಟ್ಟೆಯ ಬಳಿ ಪ್ರತಿಭಟನಾಕಾರರು ಜಮಾವಣೆಗೊಂಡಿದ್ದರು. ಪ್ರತಿಭಟನಾಕಾರರು ಶಾಸಕಿ ರೂಪಾಲಿ ನಾಯ್ಕ್ ಹಾಗೂ ಸಂಸದ ಅನಂತ ಕುಮಾರ್ ಹೆಗಡೆ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಹಾಗೂ ಬಿಜೆಪಿಯ ವಿರುದ್ಧ ಘೋಷಣೆ ಕೂಗಿದರು. ಕಾಮಗಾರಿ ಸ್ಥಗಿತಗೊಳಿಸುವವರೆಗೆ ಪ್ರತಿಭಟನೆ ಹಿಂತೆಗೆದುಕೊಳ್ಳದಿರಲು ನಿರ್ಧರಿಸಿದ್ದಾರೆ.
16 ರಂದು ಭಾರೀ ಪ್ರತಿಭಟನೆ:
ಉತ್ತರ ಕನ್ನಡ ಜಿಲ್ಲೆಯ ಮೀನುಗಾರರು ಜ.16 ರಂದು ಜಿಲ್ಲಾ ಕೇಂದ್ರ ಕಾರವಾರದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಬಂದರು ವಿಸ್ತರಣೆ ಕಾಮಗಾರಿ ಹೋರಾಟ ಎರಡನೇ ದಿನಕ್ಕೆ
Follow Us