ಬೆಂಗಳೂರು: ರಾಜ್ಯದ ಎಲ್ಲಾ ಮಾದರಿಯ ಸಹಕಾರ ಸಂಘಗಳ ಚುನಾವಣೆಯನ್ನು ಡಿಸೆಂಬರ್ 31ರವರೆಗೆ ಮುಂದೂಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಎಲ್ಲ ಸಹಕಾರ ಸಂಘಗಳ, ಸಹಕಾರ ಬ್ಯಾಂಕುಗಳ ಚುನಾವಣೆಗಳನ್ನು ಮುಂದೂಡಲಾಗಿದ್ದು, ಈಗಾಗಲೇ ಚುನಾವಣಾ ವೇಳಾಪಟ್ಟಿ ಹೊರಡಿಸಿ ಚುನಾವಣೆ ಪ್ರಕ್ರಿಯೆ ಜಾರಿಯಲ್ಲಿದ್ದರೆ ಅದನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದು ಮಾಡಲಾಗಿದೆ.
ಅವಧಿ ಮುಕ್ತಾಯಗೊಂಡ ಮತ್ತು ಮುಕ್ತಾಯಗೊಳ್ಳುವ ಸಹಕಾರಿ ಸಂಸ್ಥೆಗಳಿಗೆ ಸಹಕಾರ ಸಂಘಗಳ ಕಾಯ್ದೆ ಅನ್ವಯ ಆಡಳಿತ ಅಧಿಕಾರಿಗಳನ್ನು ನೇಮಿಸುವ ಬಗ್ಗೆ ನಿಬಂಧಕರು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ಸಹಕಾರ ಸಂಘಗಳು, ಸಹಕಾರ ಬ್ಯಾಂಕುಗಳ ಚುನಾವಣೆಯನ್ನು ಡಿಸೆಂಬರ್ 2020ರವರೆಗೆ ಮುಂದೂಡುವ ಬಗ್ಗೆ ಆಡಳಿತ ಮಂಡಳಿಗಳ ಅವಧಿ ಮುಕ್ತಾಯಗೊಂಡಿರುವ ಮತ್ತು ಮುಕ್ತಾಯಗೊಳ್ಳುವ ಸಹಕಾರ ಸಂಸ್ಥೆಗಳಿಗೆ ಆಡಳಿತ ಅಧಿಕಾರಿಗಳನ್ನು ನೇಮಿಸುವ ಬಗ್ಗೆ ಆದೇಶ ಹೊರಡಿಸಲಾಗಿದೆ.
ಸಹಕಾರ ಸಂಘ, ಬ್ಯಾಂಕ್’ಗಳ ಚುನಾವಣೆ ಡಿ.31ರವರೆಗೆ ಮುಂದೂಡಿಕೆ
Follow Us