Thursday, December 9, 2021

ಲಾಕ್’ಡೌನ್ ವೇಳೆ ಬಾವಿ ತೋಡಿದ ಪವರ್ ಲಿಫ್ಟರ್ ಅಕ್ಷತಾ ಪೂಜಾರಿ

Follow Us

ಉಡುಪಿ: ಲಾಕ್’ಡೌನ್ ಸಮಯದಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಪವರ್ ಲಿಫ್ಟರ್ ಅಕ್ಷತಾ ಪೂಜಾರಿ ಬಾವಿ ಕೊರೆದಿದ್ದಾರೆ.
ಇಬ್ಬರು ಸಹೋದರ ಹಾಗೂ ಅವರ ಸಹೋದರಿ ಮಕ್ಕಳೊಂದಿಗೆ ಸೇರಿ ಅಕ್ಷತಾ ಅವರು ಬಾವಿ ತೋಡಿದ್ದು, ನೀರೂ ಸಿಕ್ಕಿದೆ. ಬೋಳ ಗ್ರಾಮದ ತಮ್ಮ ಮನೆಯ ಅಂಗಳದಲ್ಲೇ ಬಾವಿ ಕೊರೆದಿದ್ದಾರೆ.
ಏ.8ರಿಂದ ಬಾವಿ ಅಗೆಯಲು ಆರಂಭಿಸಿದ್ದೆವು. ಸತತ 6 ದಿನಗಳ ಕಾಲ ಅಗೆದಿದ್ದೆವು. ಎಷ್ಟು ಆಳದಲ್ಲಿ ನೀರು ಸಿಗುತ್ತದೆ ಎಂಬ ಕಲ್ಪನೆ ಕೂಡ ನಮಗಿರಲಿಲ್ಲ. ಏ.24ರವರೆಗೂ ಸುಮಾರು 25 ಅಡಿ ಅಗೆದರೂ ನೀರು ಸಿಗಲಿಲ್ಲ. ಬೇಸರವಾಗಿತ್ತು. ಸಂಜೆ 5 ಗಂಟೆಗೆ ಕೆಲಸ ಮುಗಿಸುವ ವೇಳೆ ಬಾವಿಯ ಒಂದು ಮೂಲೆಯಿಂದ ನೀರು ಬರಲು ಆರಂಭವಾಯಿತು. ಇದರಿಂದ ಮನೆಯ ದೊಡ್ಡ ಸಮಸ್ಯೆ ಪರಿಹಾರವಾದಂತಾಯಿತು ಎಂದು ಅಕ್ಷತಾ ಹೇಳಿದ್ದಾರೆ.
ಏಷ್ಯಾ ಮಟ್ಟದಲ್ಲಿ ಅಕ್ಷತಾ ಅವರು 4 ಬಾರಿ ಚಿನ್ನ, ಕಾಮನ್ ವೆಲ್ತ್ ಕೂಡದಲ್ಲಿ 8 ಚಿನ್ನ, ವಿಶ್ವ ಮಟ್ಟದಲ್ಲಿ 2 ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. ರಾಜ್ಯ ಮಟ್ಟದಲ್ಲಿ 10 ಚಿನ್ನ, 2 ಬೆಳ್ಳಿ ಪದಕಗಳೊಂದಿಗೆ 5 ಬಾರಿ ಸ್ಟ್ರಾಂಗ್ ವುಮನ್ ಪ್ರಶಸ್ತಿ, ರಾಷ್ಟ್ರಮಟ್ಟದಲ್ಲಿ 10 ಚಿನ್ನ, 2 ಬೆಳ್ಳಿ ಪದಕಗಳೊಂದಿಗೆ 4 ಬಾರಿ ಸ್ಟ್ರಾಂಗ್ ವುಮನ್ ಪ್ರಶಸ್ತಿ ಗೆದ್ದಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!