newsics.com
ಬೆಂಗಳೂರು: ಬೆಂಗಳೂರು ಮಹಾನಗರದ ಹಲವೆಡೆ ನಾಳೆ ವಿದ್ಯುತ್ ಪೂರೈಕೆ ಕಡಿತವಾಗಲಿದೆ. ಲಕ್ಷ್ಮಣಪ್ಪ ಗಾರ್ಡ್ ನ್, ಚಿನ್ನಮ್ಮನ ಅಚ್ಚುಕಟ್ಟು ಮತ್ತು ಕಿಮ್ಸ್ ಕಾಲೇಜು ಪ್ರದೇಶ ಸೇರಿದಂತೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ನಿಲುಗಡೆಯಾಗಲಿದೆ.
ಬೆಳಿಗ್ಗೆ 10ಗಂಟೆಯಿಂದ ಸಂಜೆ 5 ಗಂಟೆ ತನಕ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಬೆಸ್ಕಾಂ ಮೂಲಗಳು ತಿಳಿಸಿವೆ,
ಏಪ್ರಿಲ್ 12 ರಂದು ಕೂಡ ಇದೇ ರೀತಿ ವಿದ್ಯುತ್ ಸ್ಥಗಿತಗೊಳ್ಳಲಿದೆ. ವಿದ್ಯುತ್ ಕೇಂದ್ರದಲ್ಲಿ ದುರಸ್ತಿ ಕಾರ್ಯದ ಹಿನ್ನೆಲೆಯಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಬೆಸ್ಕಾಂ ಪ್ರಕಟಿಸಿದೆ.